ವಿಶ್ವ ಪರಿಸರ ದಿನಾಚರಣೆ: ಗಿಡಮರಗಳ ಸಂರಕ್ಷಣೆಗೆ ಕರೆ ಬಸವರಾಜ ಅಯ್ಯನಗೌಡರ
World Environment Day: Basavaraja Ayyanagowda calls for the protection of trees
ಲೋಕದರ್ಶನ ವರದಿ
ಸವದತ್ತಿ 05: ಪರಿಸರದ ಸಮತೋಲನವನ್ನು ಕಾಪಾಡುವಲ್ಲಿ ಗಿಡ-ಮರಗಳ ಪಾತ್ರ ಅತ್ಯಂತ ದೊಡ್ಡದಾಗಿದ್ದು, ಪ್ರತಿಯೊಬ್ಬರೂ ಪರಿಸರ ಪ್ರೇಮಿಗಳಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಭೂಮಿಯನ್ನು ಹಸಿರಾಗಿಸಬೇಕು ಎಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಎಇಇ ಬಸವರಾಜ ಅಯ್ಯನಗೌಡರ ಹೇಳಿದರು.ನಗರದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ ಪರಿಸರ ದಿನಾಚರಣೆಯು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಗಿಡಗಳನ್ನು ನೆಡುವುದು ಮಾತ್ರವಲ್ಲದೆ, ಅವುಗಳನ್ನು ಸಮರ್ಕವಾಗಿ ಪೋಷಿಸಿ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅವರು ಕರೆ ನೀಡಿದರು.ಈ ಸಂದರ್ಭದಲ್ಲಿ ಎಮ್.ಆಯ್. ಇಂಗಳಗಿಮಠ, ಮಂಜುನಾಥ ಅಗಸಿಮನಿ, ಪ್ರಮೋದ ಗಾಂಜಿ, ಆಯ್. ಎಮ್. ದಳವಾಯಿ, ಮಂಜುನಾಥ ಇಟ್ನಾಳ, ಸಚಿನ್ ರಂಜಿಣಗಿ ಸೇರಿದಂತೆ ಉಪವಿಭಾಗದ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 