ಶ್ರೀ ಬಾಲಾಜಿ ಶುಗರ್ಸ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ
World Environment Day by Shree Balaji Sugars Chemicals Private Limited
ಯರಗಲ್ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಾಲಾಜಿ ಶುಗರ್ಸ್ ್ಘ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್, ಯರಗಲ್ ವತಿಯಿಂದ ಶುಕ್ರವಾರ ಪರಿಸರ ಜಾಗೃತಿ ಹಾಗೂ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಎಚ್.ಎಲ್. ಪಾಟೀಲ್, ರಾಹುಲ್ ಪಾಟೀಲ್, ಅದಿಕ್ ಪಾಟೀಲ್, ಶ್ರೀನಿವಾಸ್ ಅರಕೇರಿ, ಪ್ರಫುಲ್ ಪಾಟೀಲ್ ಹಾಗೂ ಶೃತಿ ಪಾಟೀಲ್ ಉಪಸ್ಥಿತರಿದ್ದರು.
ಇದೇ ವೇಳೆ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ, ಹಸಿರು ವಾತಾವರಣದ ಅಗತ್ಯತೆ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿಯ ಕುರಿತು ಅರಿವು ಮೂಡಿಸಲಾಯಿತು. ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗದೆ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ವಕ್ತಾರರು ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಥೆಯ ಪರಿಸರ ಸ್ನೇಹಿ ಕಾರ್ಯಚಟುವಟಿಕೆಗಳ ಭಾಗವಾಗಿ ಗಿಡ ನೆಡುವಿಕೆ, ಅವುಗಳ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣಕ್ಕೆ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.
ಪರಿಸರದ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಮಾರುತಿ ಗುರವ್, ಸಿದ್ದು ಐನಾಪುರ್, ಗೀರೀಶ್ ಪಾಟೀಲ್, ಸಿದ್ದಣ್ಣನವರ್, ಅನಿಲ್ ಕುಮಾರ್, ಪರಮಣ್ಣಗೌಡ ಬೆಳ್ಳಿ, ಈರಣ್ಣ ಮದರಿ, ನಿಂಗಪ್ಪ ಮೆಕಲಿ, ಸಂಜೀವ ರೆಡ್ಡಿ ಪಾಟೀಲ್, ಸಂತೋಷ ಚಿಪ್ಪಲಕಟ್ಟಿ, ರಾಘವೇಂದ್ರ ನಿಂಗಸಾನೆ, ಎ.ಎಸ್. ರೊಳ್ಳಿ, ಚಂದ್ರು ಸಾಲಿಮಠ ಸೇರಿದಂತೆ ಸಂಸ್ಥೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಸಂದೇಶವನ್ನು ಯಶಸ್ವಿಯಾಗಿ ಸಾರಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 