ಬ್ರಿಲಿಯಂಟ್ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಬ್ರಿಲಿಯಂಟ್ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ  World Environment Day celebrated at Brilliant School

ಲೋಕದರ್ಶನ ವರದಿ 

ತಾಳಿಕೋಟಿ   05  : ತಾಲೂಕಿನ ಮೈಲೇಶ್ವರದ ಶ್ರೀ ಮಾರುತಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಬಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಕುರಿತು ಪ್ರಬಂಧ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ಕೆ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಆರ್ ವಿ ಜಾಲವಾದಿ ಅವರು ಪರಿಸರದ ಮಹತ್ವ ಅದರ ಸಂರಕ್ಷಣೆ ಹಾಗೂ ನಮ್ಮ ಜವಾಬ್ದಾರಿ ಕುರಿತು ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಎನ್ ಬಿ ನಡುವಿನಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಪ್ರತಿ ವಿದ್ಯಾರ್ಥಿಗೂ ಒಂದು ಸಸಿಯನ್ನು ಬೆಳಸಲು ಒತ್ತು ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆ ಉಪಾಧ್ಯಕ್ಷ ಆರ್ ಬಿ ನಡುವಿನಮನಿ, ಕಾರ್ಯದರ್ಶಿ ಎಂ.ಬಿ. ಮಡಿವಾಳರ, ನಿರ್ದೇಶಕ ಎಸ್ ಹೆಚ್ ಪಾಟೀಲ, ನಿರ್ದೇಶಕೀಯರಾದ ಎಲ್‌.ಎಂ.ಬಿರಾದಾರ,ಎನ್‌.ಎಸ್‌.ಗಡಗಿ, ಮುಖ್ಯ ಗುರುಗಳು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.