ಕರ್ನಾಟಕ ಉಚ್ಛ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ
World Environment Day celebrated at Karnataka High Court premises
ಧಾರವಾಡ ಜೂ.13: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಿನ್ನೆ ಜೂ. 12 ರಂದು ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ವಿವಿಧ ತರಹದ ಸಸಿ ನೆಡುವ ಕಾರ್ಯಕ್ರಮವನ್ನು ಉಚ್ಛ ನ್ಯಾಯಾಲಯದ ಕಾನೂನು ಸೇವಾ ಸಮಿತಿ, ಉಚ್ಛ ನ್ಯಾಯಾಲಯದ ವಕೀಲರ ಸಂಘ, ಅರಣ್ಯ ಇಲಾಖೆ, ಮತ್ತು ತೋಟಗಾರಿಕಾ ಇಲಾಖೆ ಇವರ ಸಹಯೋಗದೊಂದಿಗೆ ಆಚರಿಸಲಾಯಿತು.
ಈ ಕಾರ್ಯಕ್ರಮದ ಅಂಗವಾಗಿ ಉಚ್ಛ ನ್ಯಾಯಾಲಯದ ಆವರಣದಲ್ಲಿ ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿಗಳಾದ ಆರ್. ದೇವದಾಸ್ ರವರು ವಿವಿಧ ಪ್ರಭೇದದ ಸಸಿಗಳನ್ನು ನೆಡುವುದರ ಮೂಲಕ ಚಾಲನೆಯನ್ನು ನೀಡಿದರು.
ಅವರೊಂದಿಗೆ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ ಯೆರೂರ್, ಹಂಚಾಟೆ ಸಂಜೀವಕುಮಾರ, ಎಂ.ಜಿ.ಎಸ್. ಕಮಾಲ್, ವೆಂಕಟೇಶ ನಾಯ್ಕ ಟಿ., ರಾಜೇಶ್ ರೈ ಕೆ., ಕೆ.ವಿ. ಅರವಿಂದ್ ಹಾಗೂ ಅಧೀಕ ವಿಲೇಖನಾಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕಾರಿ ಸಮತಿ ಸದಸ್ಯರು, ಅಡಿಷನಲ್ ಅಡ್ವೋಕೆಟ್ ಜನರಲ್, ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿ ವಿವಿಧ ಪ್ರಭೇದದ ಸಸಿಗಳನ್ನು ಉಚ್ಛ ನ್ಯಾಯಾಲಯದ ಆವರಣದಲ್ಲಿ ನೆಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಎಂದು ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದ ಅಧೀಕ ವಿಲೇಖನಾಧಿಕಾರಿ ಹಾಗೂ ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 