ಮಿಲ್ಲತ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at Millat School
ಕೊಪ್ಪಳ 09: ಎಲ್ಲಾ ರೋಗಗಳ ಮೂಲ ಅಸ್ವಚ್ಚತೆಯಾಗಿದ್ದು ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದಿನ ಪರಿಸರವನ್ನು ಸ್ವಚ್ಛವಾಗಿ ಇಡಬೇಕು ಪರಿಸರದ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಅನ್ನಪೂರ್ಣೇಶ್ವರಿ ಆಸ್ಪತ್ರೆಯ ವೈದ್ಯರಾದ ಡಾ/ಕಸ್ತೂರಿ ಕರಮುಡಿ ರವರು ಅಭಿಪ್ರಾಯಪಟ್ಟರು, ಅವರು ಶನಿವಾರ ಬೆಳಿಗ್ಗೆ ನಗರದ ಮಿಲ್ಲತ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ವತಿಯಿಂದ ಏರಿ್ಡಸಿದ ವಿಶ್ವ ಪರಿಸರ ದಿನಾಚರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು, ಮುಂದುವರೆದು ಮಾತನಾಡಿ ಮನೆಗೊಂದು ಮರ ಬೆಳೆಸಿ, ನಗರವನ್ನು ನಂದನ ವನ ವನ್ನಾಗಿ ಮಾಡಬೇಕು ಈ ದಿಶೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು ಪರಿಸರ ಹಾಳಾದರೆ ಪ್ರತಿಯೊಬ್ಬರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ.
ಅದಕ್ಕಾಗಿ ಪ್ರತಿಯೊಬ್ಬರು ತಮ್ಮ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಪರಿಸರದ ಸಂರಕ್ಷಣೆ ಮಾಡಬೇಕು, ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಉಂಟು ಮಾಡಬೇಕು, ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ ಅದನ್ನು ಅರಿತುಕೊಂಡು ನಾವು ಶ್ರಮಿಸಬೇಕು ಎಂದು ಡಾ/ ಕಸ್ತೂರಿ ಕರಮುಡಿ ಹೇಳಿದರು.ಇದೆ ವೇಳೆ ಕ್ಫಿ. ಕಸ್ತೂರಿ ಕರಮುಡಿ ರವರಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು, ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯ ಸಲಹೆಗಾರ ಎಂ ಸಾಧಿಕ್ ಅಲಿ ವಹಿಸಿದ್ದರು, ಶಾಲೆಯ ಆಡಳಿತ ಮಂಡಳಿ ನಿರ್ದೇಶಕರುಗಳಾದ ಅಬ್ದುಲ್ ಅಜೀಜ ಮಾನ್ವಿಕರ್ ಮತ್ತು ಸೈಯದ್ ಇಮಾಮ್ ಹುಸೇನ್ ಸಿಂದೋಗಿ ಸೇರಿದಂತೆ ಶಾಲೆಯ ಸಹ ಶಿಕ್ಷಕರಾದ ನಾಜಿಯಾ ಬೇಗಂ, ನರಸಿಂಹ ದೇಸಾಯಿ ಅನೇಕರು ಪಾಲ್ಗೊಂಡಿದ್ದು ಶಾಲೆಯ ಮುಖ್ಯ ಶಿಕ್ಷಕ ಮಹಮ್ಮದ್ ಅಜೀಜ್ ರೆವಡಿ ರವರು ಆರಂಭದಲ್ಲಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು,
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 