ಎಸ್‌ಜಿವಿಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at SGVR English Medium School
ಲೋಕದರ್ಶನ ವರದಿ
ಗಂಗಾವತಿ 05: ನಗರದ ವಿದ್ಯಾನಗರದಲ್ಲಿರುವ ಎಸ್‌ಜಿವಿಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಬೇಬಿ ತರಗತಿಯ ಮಕ್ಕಳಿಂದ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್. ಸಂಕುರಾತ್ರಿ ಪ್ರಸಾದ್ ಅವರು ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಸಸಿ ನೆಟ್ಟು ಅವುಗಳನ್ನು ಪೋಷಿಸಿ ಬೆಳೆಸುವ ಅಗತ್ಯತೆಯನ್ನು ಮಕ್ಕಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್. ಪ್ರಸಾದ್, ಕಾರ್ಯದರ್ಶಿ ಆರ್. ರಾಜಶೇಖರ್, ಸಹ ಕಾರ್ಯದರ್ಶಿ ಕೆ. ಕೋಟೇಶ್ವರರಾವ್, ಗೌರವಾಧ್ಯಕ್ಷ ಟಿ.ವಿ. ಸತ್ಯನಾರಾಯಣ, ಸದಸ್ಯರಾದ ಕೆ.ಬಿ.ಜಿ.ಕೆ. ರೆಡ್ಡಿ, ಎಸ್. ವೆಂಕಟೇಶ್ವರರಾವ್ ಹಾಗೂ ಟಿ.ವಿ. ಸುಬ್ಬರಾವ್ ಉಪಸ್ಥಿತರಿದ್ದರು.ಅದೇ ರೀತಿ ಸಂಸ್ಥೆಯ ಆಡಳಿತಾಧಿಕಾರಿ ವೈ. ಸುದರ್ಶನರಾವ್, ಶೈಕ್ಷಣಿಕ ಪರೀಶೀಲಕ ಪಂಪನಗೌಡ, ಮುಖ್ಯೋಪಾಧ್ಯಾಯಿನಿ ಉದಯಶ್ರೀ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 