ನಗರಸಭೆ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ
World Environment Day celebrated by planting saplings by the Municipal Council
ಹಾವೇರಿ 10 : ನಗರದ ವಿವಿಧ ಪಾರ್ಕ್ ಗಳಲ್ಲಿ ನಗರಸಭೆ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.ನಗರಸಭೆ ಪೌರಾಯುಕ್ತರಾದ ಹೆಚ್ ಕಾಂತರಾಜು ಮಾತನಾಡಿ ಉತ್ತಮ ಪರಿಸರ ನಿರ್ಮಾಣಕ್ಕೆ ಹೆಚ್ಚು ಸಸಿಗಳನ್ನು ನೆಡಲು ಸಾರ್ವಜನಿಕರು ಮುಂದಾಗಬೇಕು. ಆರೋಗ್ಯವೇ ಭಾಗ್ಯ ಎಂಬಂತೆ ಆರೋಗ್ಯಯುತ ಬದುಕಿಗೆ ಉತ್ತಮ ಪರಿಸರ ಬೇಕಾಗುತ್ತದೆ. ನಗರಸ ಸುಂದರ ನೋಟಕ್ಕೂ ಸಸಿಗಳನ್ನು ಬೆಳೆಸುವ ಕೆಲಸ ಮಾಡಬೇಕಿದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ವಾತಾವರಣ ನಿರ್ಮಿಸಲು ಸಹಕಾರ ನೀಡಬೇಕೆಂದು ಕೋರಿದರು. ಆರೋಗ್ಯ ಕಿರಿಯ ನೀರೀಕ್ಷಕರಾದ ರಮೇಶ ಮುಂಜೋಜಿ ಮಾತನಾಡಿ ನಗರದಲ್ಲಿ ಉತ್ತಮ ಪರಿಸರ ವ್ಯವಸ್ಥೆಗೆ ಸ್ವಚ್ಚತೆ ಬಹಳ ಮುಖ್ಯ ಎಲ್ಲೆಂದರಲ್ಲಿ ಕಸ ಎಸೆಯದೇ ನಗರಸಭೆ ವಾಹನ ಬಂದಾಗ ಹಾಕಬೇಕಾಗಿದೆ.ನಗರದ ಸ್ವಚ್ಚತೆ ಹಾಗೂ ಉತ್ತಮ ಪರಿಸರ ನಿರ್ಮಾಣಕ್ಕೆ ನಗರಾಡಳಿತಕ್ಕೆ ಸಹಕಾರ ನೀಡರಿ ಎಂದರು.ಈ ಸಂದರ್ಭದಲ್ಲಿ ನಗರಸಭೆ ಸಿಬ್ಬಂದಿಗಳಾದ ರೂಪಾ ನಾಯ್ಕರ್, ಗೀರೀಶ ಹರವಿ, ತಬಸುಮ ಬಾನು ಎಸ್ ಕೆ ಮತ್ತು ಎಲ್ಲಾ ಕಮ್ಯುನಿಟಿ ಮೊಬೈಲೈಸರ್ ಗಳು ಭಾಗವಹಿಸಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 