ಇಂದು ವಿಶ್ವ ಪರಿಸರ ದಿನಾಚರಣೆ

ಧಾರವಾಡ: ಜಿಲ್ಲಾಡಳಿತ, ಕನರ್ಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ, ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ, ಅರಣ್ಯ ಇಲಾಖೆ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೇಲೂರು ಕೈಗಾರಿಕೆಗಳ ಉದ್ದಿಮೆದಾರರ ಸಂಘ ಹಾಗೂ ಹುಬ್ಬಳ್ಳಿ ಧಾರವಾಡ ನಾಗರಿಕ ಪರಿಸರ ಸಮಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂನ್ 05 ರಂದು ಬೆಳಿಗ್ಗೆ 9-30 ಕ್ಕೆ "ವಿಶ್ವ ಪರಿಸರ ದಿನಾಚರಣೆ-2019"  ಕಾರ್ಯಕ್ರಮವನ್ನು ಕನರ್ಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಬೇಲೂರ ಕೈಗಾರಿಕಾ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿದೆ. 

     ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಈಶಪ್ಪ ಕೆ. ಭೂತೆ ಅವರು ಸಸಿ ನೆಡುವ ಮುಖಾಂತರ ಉದ್ಘಾಟಿಸುವರು.   

       ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ. ಬಿ. ಸಿ. ಸತೀಶ ಅಧ್ಯಕ್ಷತೆ ವಹಿಸುವರು ಹಾಗೂ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧಿಶ ಆರ್.ಎಸ್. ಚಿನ್ನಣ್ಣವರ, ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಮಹೇಶ ಕುಮಾರ ಹಾಗೂ ವಕೀಲರ ಸಂಘದ ಅಧ್ಯಕ್ಷ ಆರ್. ಯು. ಬೆಳ್ಳಕ್ಕಿ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಜಿಲ್ಲಾ ಪರಿಸರ ಅಧಿಕಾರಿ ವಿಜಯಕುಮಾರ್ ಕಡಕ್ಭಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.