ವಿಶ್ವ ಹೃದಯ ದಿನಾಚರಣೆ: ಜಾಗೃತಿ ಕಾರ್ಯಕ್ರಮ
World Heart Day: Awareness program
ವಿಜಯಪುರ 29: ಎನ್‌ಸಿಪಿ-ಎನ್‌ಸಿಡಿ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಎನ್‌ಸಿಡಿ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ, ಡಾ.ಎಲ್‌ಎಚ್‌ಬಿದರಿ ಅವರ ಅಶ್ವಿನಿ ಹಾರ್ಟ್ ಫೌಂಡೇಶನ್ ಇವರ ಸಹಯೋಗದಲ್ಲಿ ಅಶ್ವಿನಿ ಇನ್ಸಿ-್ಟಟ್ಯೂಟ್ ಆಫ್ ನರ್ಸಿಂಗ್ ಸಾಯಿನ್ಸ್ ಕಾಲೇಜ್‌ನಲ್ಲಿ ಸೋಮವಾರ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ರೋಗದ ಕುರಿತು ಜಾಗೃತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಹೃದ್ರೋಗ ಬರಲು ಕಾರಣಗಳು, ಗುಣಲಕ್ಷಣಗಳು ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅಪ್ಪಾಸಾಹೇಬ ಇನಾಮದಾರ, ಕಾರ್ಡಿಯಾಲಾಜಿಸ್ಟ್ ಡಾ.ಗೌತಮ ವಗ್ಗರ, ಡಾ.ಶಂಕರಗೌಡ ಪಾಟೀಲ, ನರ್ಸಿಂಗ್ ಕಾಲೇಜಿನ ಪ್ರಾಂಶುಪರಾದ ಡಾ.ರಜನಿದೇವಿ ಹಿರೇಮಠ, ಆರೋಗ್ಯ ಇಲಾಖೆಯ ಜಾನ್ ಕಟವಟಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಗಂಗಾಧರ ಕೋಳೂರ, ಡಾ.ಪ್ರಿಯದರ್ಶಿನಿ ಕೆಂಚರಡ್ಡಿ, ಡಾ. ಸುರೇಶ ಪಾಶ್ಚಾಪುರ, ಆರ್.ವಿ.ಹೊನವಾಡ ಸೇರಿದಂತೆ ಆರೋಗ್ಯ ಇಲಾಖೆ ವಿವಿಧ ಅಧಿಕಾರಿಗಳು, ಕಾಲೇಜಿನ ಬೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀಕಾಂತ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಎನ್.ಆರ್.ಬಾಗವಾನ್ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 