ವಿಶ್ವ ಹೆಪಟೈಟಿಸ್ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ
World Hepatitis Day awareness march launched
ವಿಶ್ವ ಹೆಪಟೈಟಿಸ್ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ
ಹಾವೇರಿ 29 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಹೆಪಟೈಟಿಸ್ ನಿಯಂತ್ರಣ ದಿನಾಚರಣೆ ಪ್ರಯುಕ್ತ ಆಯೋಜಿಸಲಾದ ಜಾಗೃತಿ ಜಾಥಾಕ್ಕೆ ಸೋಮವಾರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್.ಹಾವನೂರ ಚಾಲನೆ ನೀಡಿದರು.
ಜಿಲ್ಲಾ ವೈರಲ್ ಹೆಪಟೈಟಿಸ್ ನಿರ್ವಾಹಣಘಟಕದ ನೋಡಲ್ ಅಧಿಕಾರಿ ಡಾ: ನೀಲೇಶ್ ಎಮ್.ಎನ್. ಅವರು ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹೆಪಟೈಟಿಸ್-ಬಿ ಲಸಿಕಾ ಶಿಬಿರಗಳನ್ನು ಎಲ್ಲಾ ಆರೋಗ್ಯಇಲಾಖೆಯ ಸಂಸ್ಥೆಗಳಲ್ಲಿ ಆಯೋಜಿಸಲಾಗಿದೆ. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಲಸಿಕೆ ಪಡೆಯಬೇಕು ಎಂದು ಸಲಹೆ ನೀಡಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಎ.ಆರ್.ಟಿ ವೈದ್ಯಾಧಿಕಾರಿ ಡಾ. ಜಯಲಕ್ಷ್ಮಿ., ಡಾ. ಬಸವರಾಜ ತಳವಾರ, ವೈದ್ಯಾಧಿಕಾರಿಗಳು, ಜಿಲ್ಲಾ ಶುಶ್ರೂಷಕಿಯರ ತರಬೇತಿ ಕೇಂದ್ರದ ನರ್ಸಿಂಗ್ ಕಾಲೇಜಿನಉಪನ್ಯಾಸಕರು, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಆಸ್ಪತ್ರೆ ಆವರಣದಿಂದ ಹೊರಟ ಜಾಗೃತಿ ನಗರದ ಹೊಸಮನಿ ಸಿದ್ದಪ್ಪ ವೃತದವರೆಗೆ ಜರುಗಿತು. ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 