29ರಂದು ಅರ್ಥಪೂರ್ಣವಾಗಿ ವಿಶ್ವ ಮಾನವ ದಿನಾಚರಣೆ

ಕೊಪ್ಪಳ 24: ಇದೇ ಡಿ. 29ರಂದು ವಿಶ್ವಮಾನವ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಡಳಿತ ದಿಂದ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದರು.

ವಿಶ್ವಮಾನವ ದಿನಾಚರಣೆ ಪ್ರಯುಕ್ತ ಇಂದು (ಡಿ. 24) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ವಿಶ್ವಮಾನವ ದಿನಾಚರಣೆಯನ್ನು ಡಿ. 29ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾಡಳಿ ಭವನದಲ್ಲಿರುವ ಆಡಿಟೋರಿಯಂ ಹಾಲ್ನಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮುಖಾಂತರ ಆಚರಣೆ ಮಾಡಲಾಗುತ್ತದೆ.  ಅಲ್ಲದೇ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.  ಈ ಕಾರ್ಯಕ್ರಮಕ್ಕೆ 8, 9, ಹಾಗೂ 10ನೇ ತರಗತಿ ವಿದ್ಯಾಥರ್ಿಗಳು ಮತ್ತು ಪದವಿ ಪೂರ್ವ, ಪದವಿ ಕಾಲೇಜಿನ ವಿದ್ಯಾಥರ್ಿಗಳು ಮತ್ತು ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು.  ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು.  ಕುವೆಂಪು ಭಾವಗೀತೆ, ಕವನ, ಹಾಡುಗಳನ್ನು ಹಾಡುವುದರ ಮೂಲಕ ಇಂದಿನ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಕುವೆಂಪು ಅವರ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುವುದು.  ಕಾರ್ಯಕ್ರಮಕ್ಕೆ ಬೇಕಾಗುವ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಸಭೆಯಲ್ಲಿ ನಗರಾಭಿವೃದ್ಧಿ ಯೋಜನಾ ನಿದರ್ೇಶಕ ಸಿದ್ದರಾಮೇಶ್ವರ, ಹಿರಿಯ ಸಾಹಿತಿ ಎಚ್.ಎಸ್. ಪಾಟೀಲ್, ಅಲ್ಲಮಪ್ರಭು ಬೇಟದೂರ, ಡಾ. ಮಹಾಂತೇಶ ಮಲ್ಲನಗೌಡರ್, ಬಸವರಾಜ ಆಕಳವಾಡಿ, ವಿಠ್ಠಪ್ಪ ಗೋರಂಟ್ಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.