ವಿಶ್ವ ಅಧಿಕ ರಕ್ತದೊತ್ತಡ ದಿನ: ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ
World Hypertension Day: Live phone-in health awareness program
ಲೋಕದರ್ಶನ ವರದಿ
ಬೆಳಗಾವಿ 19: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಸಮುದಾಯ ಬಾನುಲಿ ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳವಾರ ದಿನಾಂಕ 19ನೇ ಮೇ 2026 ರಂದು ವಿಶ್ವ ಅಧಿಕ ರಕ್ತದೊತ್ತಡ ದಿನದ ಅಂಗವಾಗಿ ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಹಿತು. ಕಾರ್ಯಕ್ರಮದಲ್ಲಿ ಕೆಎಲ್‌ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯರುಗಳಾದ ಡಾ. ರೇಖಾ ಪಾಟೀಲ, ಡಾ. ಮಾಧವ ಪ್ರಭು ಮತ್ತು ಡಾ. ಅಂಜಲಿ ಮೇಟಗುಡ್ಡಮಠ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಧಿಕ ರಕ್ತದೊತ್ತಡ ಅಥವಾ ಹೈ-ಬಿಪಿ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರಲ್ಲಿ ಕಂಡು ಬರುತ್ತಿರುವ ಆರೋಗ್ಯ ಸಮಸ್ಯೆಯಾಗಿದೆ.
ಇದು ಬರೀ ವಯಸ್ಸಾದವರಲ್ಲಿ ಮಾತ್ರವಲ್ಲ ಯುವಕರೂ ಕೂಡ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ 30-40 ವರ್ಷ ವಯಸ್ಸಿನವರೂ ಕೂಡ ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಹೊಂದಿದ್ದಾರೆ. ಇದಕ್ಕೆ ಕಾರಣವೇನು, ಲಕ್ಷಣಗಳು, ಚಿಕಿತ್ಸೆ ಮತ್ತು ಇದನ್ನು ಯಾವ ರೀತಿ ತಡೆಗಟ್ಟಬಹುದು ಎಂಬುದರ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 