ವಿಶ್ವ ಕಾರ್ಮಿಕ ದಿನ ವಿಶಿಷ್ಟ ರೀತಿಯಲ್ಲಿ ಆಚರಣೆ
World Labor Day celebrated in a unique way
ತಾಳಿಕೋಟಿ 01: ಪಟ್ಟಣದ ನಿವೃತ್ತ ಶಿಕ್ಷಕ ಜಿ.ಎಸ್.ಜಮ್ಮಲದಿನ್ನಿ ದಂಪತಿಗಳು ತಮ್ಮ 40ನೇ ವಿವಾಹ ವಾರ್ಷಿಕೋತ್ಸವವನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ಆಚರಿಸಿದ್ದಾರೆ.
ಶುಕ್ರವಾರ ವಿಶ್ವ ಕಾರ್ಮಿಕ ದಿನದಂದೇ ತಮ್ಮ 40ನೇ ವಿವಾಹ ವಾರ್ಷಿಕೋತ್ಸವ ಕೂಡಿ ಬಂದಿರುವುದರಿಂದ ಈ ಮಹತ್ವದ ದಿನವನ್ನು ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷಿ ಕಾರ್ಮಿಕರು ಪೌರಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರೊಂದಿಗೆ ವಿಶಿಷ್ಟ ರೀತಿಯಲ್ಲಿ ಆಚರಿಸುವುದರೊಂದಿಗೆ ಈ ಕ್ಷೇತ್ರದ ಎಂಟು ಜನ ಕಾಯಕಯೋಗಿಗಳನ್ನು ತಮ್ಮ ಮನೆಗೆ ಆಮಂತ್ರಿಸಿ ಅವರನ್ನು ಗೌರವಿಸಿ ಸನ್ಮಾನಿಸಿದ್ದಾರೆ. ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿ ಜಮ್ಮಲದಿನ್ನಿಯವರು ಸಮಾಜದಲ್ಲಿ ಇತರರಿಗೂ ಮಾದರಿಯಾಗಿದ್ದಾರೆ.
ಕಾರ್ಯಕ್ರಮದಲ್ಲಿ ಸನ್ಮಾನಿತಗೊಂಡಿರುವ ಕಾರ್ಮಿಕರು ಅವರ ವಾರ್ಷಿಕೋತ್ಸವಕ್ಕೆ ಶುಭ ಕೋರುವುದರೊಂದಿಗೆ ಅವರ ಆಯುಷ್ಯ ಆರೋಗ್ಯಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 