ವಿಶ್ವ ಸೊಳ್ಳೆ ದಿನಾಚರಣೆ ಕಾರ್ಯಕ್ರಮ
World Mosquito Day Program
ಲೋಕದರ್ಶನ ವರದಿ
ಹಾವೇರಿ.ಆ.25(ಕರ್ನಾಟಕ ವಾರ್ತೆ): ವಿಶ್ವ ಸೊಳ್ಳೆ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ಹಾವೇರಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಫ್ರೌಢ ಶಾಲೆ ನಂ-2 ರಲ್ಲಿ ಜರುಗಿತು. ಜಿಲ್ಲಾ ರೋಗ ವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ ಸರಿತಾ ವೀರಕ್ತಮಠ ಅವರು ಮಾತನಾಡಿ, ಸೊಳ್ಳೆ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಸೊಳ್ಳೆ ನಿಯಂತ್ರಣದ ಮುಂಜಾಗ್ರತೆ ಕ್ರಮದ ಕುರಿತು ಆರೋಗ್ಯ ಶಿಕ್ಷಣ ನೀಡಲಾಯಿತು ಹಾಗೂ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಪ್ರಭಾಕರ ಕುಂದೂರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ, ಎಂಟಾಮಾಲಜಿಸ್ಟ್ ಶ್ರೀಕಾಂತ್ ಪಾಟೀಲ್, ಮುಖ್ಯೋಪಾಧ್ಯಾಯರಾದ ಪುಪ್ಪಲತಾ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 