ವಿಶ್ವ ನ್ಯೂಮೋನಿಯಾ ದಿನಾಚರಣೆ
World Pneumonia Day
ಕೊಪ್ಪಳ 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಭಾಗ್ಯನಗರ ವ್ಯಾಪ್ತಿಯ ನವನಗರದ ಅಂಗನವಾಡಿ ಕೇಂದ್ರದಲ್ಲಿ ಬುಧವಾರದಂದು ವಿಶ್ವ ನ್ಯೂಮೋನಿಯಾ ದಿನಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಅವರು ಮಾತನಾಡಿ, ಪ್ರತಿ ವರ್ಷ ನವೆಂಬರ್ 12 ರಂದು ವಿಶ್ವ ನ್ಯೂಮೋನಿಯಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಇದರ ಉದ್ದೇಶ ನ್ಯುಮೋನಿಯಾದಿಂದ ಉಂಟಾಗುವ ಸಾವು ನೋವುಗಳ ತಡೆಗಟ್ಟಲು ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ.
ವಿಶ್ವ ಆರೋಗ್ಯ ರಕ್ಷಣಾ ವ್ಯವಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇತರೆ ಸಂಸ್ಥೆಗಳು ಕೈಜೋಡಿಸಿ, ಜಾಗೃತಿ ಮೂಡಿಸಲಾಗುತ್ತದೆ. ಲಸಿಕೆ ಮತ್ತು ಅದರ ಗುಣಮಟ್ಟದ ಚಿಕಿತ್ಸೆಯ ಮಹತ್ವವನ್ನು ತಿಳಿಸುವುದಾಗಿದೆ. ನ್ಯೂಮೋನಿಯಾ ಒಂದು ಶ್ವಾಸಕೋಶದ ಸೋಂಕಾಗಿದ್ದು, ಶ್ವಾಸಕೋಶದಲ್ಲಿನ ಗಾಳಿಯ ಚೀಲಗಳಿಗೆ ಹರಡಿ, ಸೋಂಕಿನ ದ್ರವದಿಂದ ಶ್ವಾಸಕೋಶ ಬಲಹೀನಗೊಳ್ಳುತ್ತದೆ. ಇದು ಎರಡು ಶ್ವಾಸಕೋಶಗಳಿಗೂ ಹರಡಬಹುದು ಎಂದು ಹೇಳಿದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 