ವಿಶ್ವ ಜನಸಂಖ್ಯಾ ದಿನ ಆಚರಣೆ
World Population Day Celebration
ತಾಳಿಕೋಟಿ 13: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪುರ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಹಾಗೂ ತಾಳಿಕೋಟಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ರಾಷ್ಟ್ರೀಯ ಡೇಂಗೀ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜನಸಂಖ್ಯಾ ದಿನಾಚರಣೆ ಉದ್ದೇಶ ಹಾಗೂ ಘೋಷವಾಕ್ಯ ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವಿನ ಆರೋಗ್ಯಕರ ಅಂತರ ಕಾಪಾಡುವುದರ ತಾಯಿ ಮತ್ತು ಮಕ್ಕಳ ಆರೋಗ್ಯ ವ್ರದ್ದಿಸುವದೊಂದಿಗೆ ಅನಗತ್ಯ ಗರ್ಭದಾರಣೆ ತಡೆಗಟ್ಟಬಹುದು ಎಂಬುದರ ಕುರಿತು ಅನಸುಯಾ ತೇರದಾಳ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿಗಳು ಮಾತನಾಡಿದರು ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯೆ ದಿನಾಚರಣೆ ಯನ್ನು ಆಚರಿಸಲಾಗುವುದು ಎಂದು ತಿಳಿಸಿದರು.
ಜನಸಂಖ್ಯೆ ಬೆಳವಣಿಗೆಯಿಂದ ಆಗುವ ದುಷ್ಪರಿಣಾಮ ಹಾಗೂ ಜನಸಂಖ್ಯೆ ದಿನಾಚರಣೆ ಉದ್ದೇಶಗಳ ಕುರಿತು ತಿಳಿಸಿದರು. ಕುಟುಂಬ ಕಲ್ಯಾಣ ಯೋಜನೆಯ ಶಾಶ್ವತ ಮತ್ತು ತಾತ್ಕಾಲಿಕ ವಿಧಾನಗಳ ಬಳಕೆ ಬಗ್ಗೆ ತಿಳಿಸಿದರು. ಜನನಗಳ ನಡುವೆ ಅಂತರ ಬಾಲ್ಯ ವಿವಾಹ ಮದುವೆಯ ವಯಸ್ಸು ಹೆಣ್ಣಿಗೆ 18 ವರ್ಷ, ಗಂಡಿಗೆ 21 ವರ್ಷ ಆಗಿರಬೇಕೆಂದು ತಿಳಿಸಿದರು. ನಂತರ ಬಿ.ಎಸ್.ಶಿವಯೋಗಿಮಠ ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿಗಳು ಡೆಂಗೀ ನಿಯಂತ್ರಣ ನಮ್ಮೆಲ್ಲರ ಹೊಣೆ ಡೆಂಗೀ ಹರಡುವ ಬಗ್ಗೆ ಮುನ್ನೆಚ್ಚರಿಕೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾಂಚನಾ ಪಾಟೀಲ,ನೂರಜಾನ ಬೋರಗಿ, ಬಿಸ್ಮಿಲ್ಲಾ ಬಿದಕೋಟಿ ಮಹಾದೇವಿ ಟಕ್ಕಳಕಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು. ಅನ್ನಪೂರ್ಣ ನಡುವಿನಮನಿ ಃಊಇಓ ಸ್ವಾಗತಿಸಿ ವಂದಿಸಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ 