ಮುಧೋಳ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ವಿಶ್ವ ಮಣ್ಣಿನ ದಿನಾಚರಣೆ
World Soil Day celebrated by the Agriculture Department in Mudhol village
ಕೊಪ್ಪಳ 05 : ಕೃಷಿ ಇಲಾಖೆ ವತಿಯಿಂದ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ ಶ್ರೀ ತ್ರಿಲಿಂಗೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ ಶುಕ್ರವಾರದಂದು ಜಲಾನಯನ ಉತ್ಸವ ಹಾಗೂ ವಿಶ್ವ ಮಣ್ಣು ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕೊಪ್ಪಳ ಕೃಷಿ ವಿಸ್ತರಣಾ ಕೇಂದ್ರದ ಕೃಷಿ ವಿಜ್ಞಾನಿ ಡಾ.ಎಂ. ವಿ ರವಿ ಮಾತನಾಡಿ, ಮಣ್ಣು ಹಾಗೂ ನೀರು ಸಂರಕ್ಷಣೆಯು ಹಿಂದಿಗಿಂತಲೂ ಈಗ ಹೆಚ್ಚು ಪ್ರಸ್ತುತವಾಗಿದೆ ಎಂದರು.ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಜಿ. ಡಿ. ಕೃಷ್ಣಮೂರ್ತಿ ಮಾತನಾಡಿ, ಸಾಂಪ್ರದಾಯಿಕ ಸಾವಯವ ಕೃಷಿಯಿಂದ ಮಾತ್ರವೇ ಮಣ್ಣಿನ ಜೀವಂತಿಕೆಯನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.
ಯಲಬುರ್ಗಾ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗ ಬಬಲಾದ ಮಾತನಾಡಿ, ಆಹಾರ ಭದ್ರತೆಯ ಇಂದಿನ ಅನಿವಾರ್ಯತೆಯ ಜೊತೆ ಜೊತೆಗೆ ಮಣ್ಣು ಮತ್ತು ನೀರಿನ ಸದ್ಬಳಕೆಯೂ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್‌ನ ಒಂಬುಡ್ಸಪರ್ಸನ್ ವೀರಣ್ಣ ಕಮತರ ಮಾತನಾಡಿ, ಇಂದಿನ ನಗರಗಳ ಆಹಾರ ಮತ್ತು ಆರೋಗ್ಯವು ಹಳ್ಳಿಯ ಮಣ್ಣಿನ ಸಂರಕ್ಷಣೆಯಲ್ಲಿಯೇ ಅಡಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಮಮತಾಜ್ ಬಿ. ಹುಸೇನ್‌ಸಾಬ್ ಹಿರೇಮನಿ, ಉಪ ಕೃಷಿ ನಿರ್ದೇಶಕ ಸಿದ್ದೇಶ್ವರ ಎಲ್., ಯಲಬುರ್ಗಾ ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ತುಂಬಳ ಹಾಗೂ ಗ್ರಾಮದ ಹಿರಿಯರು, ಮುಖಂಡರು ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 