ಕೊಪ್ಪಳ 13: ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನಾಚರಣೆ" ಅಂಗವಾಗಿ ಕೊಪ್ಪಳ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಕಾರ್ಯಾಲಯ ಲಯ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ (ಸೆ.13) ಶುಕ್ರವಾರದಂದು ಆಯೋಜಿಸಲಾದ ಜನ ಜಾಗೃತಿ ಜಾಥಾವನ್ನು ಕಾರ್ಯಕ್ರಮಕ್ಕೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಎಸ್.ಕೆ ದೇಸಾಯಿ ಅವರು ಚಾಲನೆ ನೀಡಿದರು.
ಕೊಪ್ಪಳ ತಾಲೂಕಾ ಆರೋಗ್ಯ ಅಧಿಕಾರಿ ಡಾ.ರಾಮಾಂಜನೇಯ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿ ವರ್ಗ ಮತ್ತು ನಗರ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರು ಕಿರಿಯ ಆರೋಗ್ಯ ಸಹಾಯಕಿ ತರಬೇತಿ ಕೇಂದ್ರ ವಿದ್ಯಾಥರ್ಿನಿಯರು ಹಾಗೂ ಆಶಾ ಕಾರ್ಯಕರ್ತೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಾಥವು ಹಳೇ ಜಿಲ್ಲಾ ಆಸ್ಪತ್ರೆ ಆವರಣದಿಂದ ಕೇಂದ್ರ ಬಸ್ ನಿಲ್ದಾಣದಿಂದ ಡಾ. ಸಿಂಪಿ ಲಿಂಗಣ್ಣ ರಸ್ತೆ ಮಾರ್ಗವಾಗಿ ಪುನಃ ಹಳೇ ಜಿಲ್ಲಾ ಆಸ್ಪತ್ರೆ ಆವರಣದವರೆಗೆ ಸಾಗಿ ನಗರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.