ವಿಶ್ವ ಆತ್ಮಹತ್ಯೆ ತಡೆ ದಿನ: ಕೆಎಲ್‌ಇ ವೇಣುಧ್ವನಿಯಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ

ವಿಶ್ವ ಆತ್ಮಹತ್ಯೆ ತಡೆ ದಿನ: ಕೆಎಲ್‌ಇ ವೇಣುಧ್ವನಿಯಲ್ಲಿ ನೇರ ಫೋನ್  ಇನ್ ಕಾರ್ಯಕ್ರಮ  World Suicide Prevention Day: Live phone-in program on KLE Venudhvani

ಲೋಕದರ್ಶನ ವರದಿ 

ಬೆಳಗಾವಿ 9: ವಿಶ್ವ ಆತ್ಮಹತ್ಯೆ ತಡೆ ದಿನದ ಅಂಗವಾಗಿ ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ ಕೇಂದ್ರ, ಕೆಎಲ್‌ಇ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ ಕೆಎಲ್‌ಇ ಸಂಸ್ಥೆಯ ಶ್ರೀ ಬಿ.ಎಂ. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಸೆ.10ರಂದು ಬೆಳಿಗ್ಗೆ 10ರಿಂದ 11 ಗಂಟೆಯವರೆಗೆ ಆರೋಗ್ಯ ಜಾಗೃತಿ ಕುರಿತ ನೇರ ಫೋನ್ ಹಿ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.  

ಬೆಳಗಾವಿಯ ಕೆಎಲ್‌ಇ ಶ್ರೀ ಬಿ.ಎಂ. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಹಾಗೂ ಪ್ರಾಚಾರ್ಯರಾದ ಡಾ. ಸುಹಾಸಕುಮಾರ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಸಲಹೆ ಹಾಗೂ ಪರಿಹಾರ ನೀಡಲಿದ್ದಾರೆ.  

ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಹಾಗೂ ಅಗತ್ಯ ಆರೋಗ್ಯ ಸಲಹೆಗಳನ್ನು ಪಡೆಯಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ ರೇಡಿಯೊ ಈಗ ಮೊಬೈಲ್ ಆ್ಯಪ್ನಲ್ಲಿಯೂ ಲಭ್ಯವಿದೆ ಎಂದು ನಿಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.