ವಿಶ್ವ ಕ್ಷಯರೋಗ ದಿನಾಚರಣೆ: ಜಾಗೃತಿ ಜಾಥಕ್ಕೆ ನ್ಯಾ. ಮಹಾಂತೇಶ ಎಸ್ ದರಗದ ಅವರಿಂದ ಚಾಲನೆ

World Tuberculosis Day: Awareness rally launched by Justice Mahantesh S. Dargada

ವಿಶ್ವ ಕ್ಷಯರೋಗ ದಿನಾಚರಣೆ: ಜಾಗೃತಿ ಜಾಥಕ್ಕೆ ನ್ಯಾ. ಮಹಾಂತೇಶ ಎಸ್ ದರಗದ ಅವರಿಂದ ಚಾಲನೆ 

ಕೊಪ್ಪಳ 24: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳ ನಗರದಲ್ಲಿ ಸೋಮವಾರ ಏರಿ​‍್ಡಸಲಾದ ಜಾಗೃತಿ ಜಾಥಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್‌. ದರಗದ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಶಶೀಧರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದಸೇರಿದಂತೆ ಇತರರು ಉಪಸ್ಥಿತರಿದ್ದರು.*ಜಾಗೃತಿ ಜಾಥ:* ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಜಾಗತಿಕ ಜಾಥವು ಅಲ್ಲಿಂದ ಪ್ರಾರಂಭಗೊಂಡು ಬಸ್ ನಿಲ್ದಾಣ, ಸಿಂಪಿ ಲಿಂಗಣ್ಣ ರಸ್ತೆ, ದಿವಟರ್ ವೃತ್ತ, ಜವಾಹಾರ ರಸ್ತೆ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ನಡೆಯುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿ. ಜಾಥದಲ್ಲಿ  ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.