ವಿಶ್ವ ಕ್ಷಯರೋಗ ದಿನ: ನೇರ ಫೋನ್‌-ಇನ್ ಕಾರ್ಯಕ್ರಮ

World Tuberculosis Day: Live Phone-in Program

ಬೆಳಗಾವಿ 24: ಕೆಎಲ್‌ಇ ವೇಣುಧ್ವನಿ 90.4 ಎಫ್‌. ಎಮ್‌. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಮಂಗಳವಾರ ದಿ.  25ನೆ ಮಾರ್ಚ್‌ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ವಿಶ್ವ ಕ್ಷಯರೋಗ ದಿನ ಅಂಗವಾಗಿ ನೇರ ಫೋನ್‌-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.  

ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಜ್ಯೋತಿ ಹಟ್ಟಿಹೋಳಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್‌. ಎಮ್‌. ರೇಡಿಯೋ ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.