ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ
World Yoga Day celebrated at Budihala Government High School
ಲೋಕದರ್ಶನ ವರದಿ
ಬೈಲಹೊಂಗಲ 21 : ಯೋಗ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಲಿ ಎಂದು ಬೂದಿಹಾಳ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಹೇಳಿದರು. ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ‘ಆರೋಗ್ಯಕರ ವಯಸ್ಸಿಗೆ ಯೋಗ’ ಎಂಬ ಥೀಮ್ ಅಡಿಯಲ್ಲಿ 12ನೆಯ ವಿಶ್ವ ಯೋಗ ದಿನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಗ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಾಗುವುದಲ್ಲದೇ ದೈಹಿಕ, ಮಾನಸಿಕ ಆರೋಗ್ಯ ಉತ್ತಮವಾಗುತ್ತದೆ. ವಿಶ್ವಕ್ಕೆ ಯೋಗದ ಪರಿಚಯ ಮಾಡಿಕೊಟ್ಟ ಭಾರತದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು ಎಂದು ಅವರು ಅಭಿಪ್ರಾಯಪಟ್ಟರು. ಪ್ರತಿದಿನ ಒಂದಿಷ್ಟು ಸಮಯ ಯೋಗಾಭ್ಯಾಸಕ್ಕೆ ಮೀಸಲಿಡುವುದರಿಂದ ಒತ್ತಡರಹಿತ ಬದುಕು ಸಾಗಿಸಬಹುದು ಎಂದು ಅವರು ಹೇಳಿದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ, ಇತಿಹಾಸ ತಿಳಿಸಿಕೊಡುವುದರ ಜೊತೆಗೆ ವಜ್ರಾಸನ, ವಕ್ರಾಸನ, ಪದ್ಮಾಸನ, ಪಾದಹಸ್ತಾಸನ, ತ್ರಿಕೋನಾಸನ, ಭುಜಂಗಾಸನ, ಮಕರಾಸನ, ಅರ್ಧ ಹಾಲಾಸನ ಮುಂತಾದ ವಿವಿಧ ಯೋಗಾಸನಗಳನ್ನು ಮತ್ತು ಪ್ರಾಣಾಯಾಮವನ್ನು ಮಾಡಿಸಿದರು. ಯೋಗಮಂತ್ರ, ಓಂಕಾರ ಹೇಳಿಕೊಡಲಾಯಿತು. ವಿದ್ಯಾರ್ಥಿಗಳಾದ ಭೂಮಿಕಾ ಗರಗದ, ಶ್ರಾವಣಿ ಹೊಂಗಲ, ಶ್ರೇಯಾ ಶೀಗಿಹಳ್ಳಿಮಠ ಯೋಗದ ಉಪಯೋಗದ ಕುರಿತು ಭಾಷಣ ಮಾಡಿದರು. ಕಾರ‌್ಯಕ್ರಮದಲ್ಲಿ ಶಿಕ್ಷಕರಾದ ಜಗದೀಶ ನರಿ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ಗಾಯತ್ರಿ ತುರಾದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾ ಗರಗದ ನಿರೂಪಿಸಿದರು. ಚನ್ನಬಸಮ್ಮ ಸೊಗಲದ ಸ್ವಾಗತಿಸಿದರು. ಪಲ್ಲವಿ ಸೂರ್ಯವಂಶಿ ವಂದಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 