ಮನರೇಗಾ ಕಾಮಗಾರಿ ಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆ
World Yoga Day celebrated at MNREGA construction site
ಲೋಕದರ್ಶನ ವರದಿ
ಇಂಡಿ 21 : ತಾಲೂಕಿನ ಇಂಗಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದ ಹತ್ತಿರ ಕೆರೆ ಹೂಳು ತೆಗೆಯುವ ಕಾಮಗಾರಿ ಪ್ರಗತಿಯಲ್ಲಿದ್ದು ಒಟ್ಟು 40 ಜನ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ. ಸದರಿ ಕಾಮಗಾರಿ ಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಜೊತೆಗೆ ಇಂಡಿ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡ ಎಲ್ಲ ಅಮೃತ ಸರೋವರಗಳಲ್ಲಿ ವಿಶ್ವ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು.
ಜೊತೆಗೆ ಏಕಾಗ್ರತೆ, ಮನಸ್ಸಿನ ನೆಮ್ಮದಿಗಾಗಿ, ರೋಗ ನಿರೋಧಕ ಶಕ್ತಿ ವೃದ್ಧಿ, ಸಲುವಾಗಿ ಎಲ್ಲರೂ ಪ್ರತಿ ದಿನ ಯೋಗ ಮಾಡಬೇಕು. ತಾಲೂಕಿನ ಝಳಕಿ ಪಂಚಾಯತ ವ್ಯಾಪ್ತಿಯ ಅರ್ಜನಾಳ, ಕೊಳೂರಗಿ ಪಂಚಾಯತ್ ವ್ಯಾಪ್ತಿಯ ಸಾವಳಸಂಗ, ಹಾಗೂ ನಿಂಬಾಳ ಕೆಡಿ, ಚವಡಿಹಾಳ ಪಂಚಾಯತ್ ವ್ಯಾಪ್ತಿಯ ಚೋರಗಿ, ಹಾಗೂ ಅಂಜುಟಗಿ, ಬಬಲಾದ, ಮತ್ತು ಬಸನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕ್ಯಾತನಕೇರಿ ಗ್ರಾಮದಲ್ಲಿ ಅಮೃತ ಸರೋವರಗಳ ನಿರ್ಮಾಣ ್ಘ ಅಭಿವೃದ್ಧಿ ಪಡಿಸಲಾಗಿದೆ. ಈ ಸಮಯದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಗ್ರಾಮ ಕಾಯಕ ಮಿತ್ರರು, ಮೆಟ್ ಗಳು, ನರೇಗಾ ಕೂಲಿಕಾರರು, ವಿದ್ಯಾರ್ಥಿಗಳು, ಸಾರ್ವಜನಿಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 