ಗ್ರಾಮದಲ್ಲಿ ತಯಾರಾಗುವ ಕುಡಿಯುವ ನೀರಿನಲ್ಲಿ ಹುಳು : ಅವಧಿ ಮೀರಿದ ಕೂಲ್‌ಡ್ರಿಂಕ್ಸ್
Worms in drinking water prepared in village: Expired cool drinks
ಲೋಕದರ್ಶನ ವರದಿ
ಕಂಪ್ಲಿ 31 : ಎಮ್ಮಿಗನೂರು ಗ್ರಾಮದಲ್ಲಿ ತಯಾರಾಗುವ ಕುಡಿಯುವ ನೀರಿನ ಬಾಟಲ್ ಸರಬರಾಜಿನಲ್ಲಿ ಹುಳುಗಳನ್ನು ಒಳಗೊಂಡಿರುವ ಕುಡಿವ ನೀರಿನ ಬಾಟಲ್, ಅವಧಿ ಮೀರಿದ ಕೂಲ್‌ಡ್ರಿಂಕ್ಸ್ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತಕ್ರಮ ಕೈಗೊಳ್ಳಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ವಿ.ವೀರೇಶ್ ಆಗ್ರಹಿಸಿದರು.
ತಾಲೂಕಿನ ಎಮ್ಮಿಗನೂರು ಗ್ರಾಮದ ರೈತ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ರೈತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರಿನ ಬಾಟಲ್‌ಗಳನ್ನು ತಯಾರು ಮಾಡುತ್ತಿದ್ದು, ಇಲ್ಲಿನ ಅಸ್ವಚ್ಚತೆ ಹಾಗೂ ಹುಳು ತುಂಬಿದ ನೀರನ್ನು ಬಾಟಲಿನಲ್ಲಿ ತುಂಬಿ ಮಾರಾಟ ಮಾಡುವ ಮೂಲಕ ಜನರಿಗೆ ನೀರು ಕುಡಿಸಿ, ಆರೋಗ್ಯದ ಮೇಲೆ ದುಶ್‌ಪರಿಣಾಮ ಬೀರುವಂತೆ ಮಾಡಿದ್ದಾರೆ. ಕಳಪೆ ಗುಣಮಟ್ಟದ ಕೂಲ್ಲಿಂಕ್ಸ್ ಕುಡಿದ ಬಾಲಕನೊಬ್ಬ ಕೆಲ ದಿನಗಳ ಹಿಂದೆ ಅಸ್ವಸ್ಥನಾಗಿದ್ದು, ಪ್ರಕರಣವನ್ನು ಮುಚ್ಚಿಹಾಕಿದ್ದಾರೆ.
ಜನರ ಆರೋಗ್ಯ ಕಾಪಾಡುವಲ್ಲಿ ಗ್ರಾಮಾಡಳಿತ, ತಾಲೂಕು ಆಡಳಿತ ನಿಗಾವಹಿಸಬೇಕು. ಕಳಪೆ ಗುಣಮಟ್ಟದ ನಕಲಿ ನೀರಿನ ಬಾಟಲ್, ಕೂಲ್ಲಿಂಕ್ಸ್, ಕಳಪೆ ಅಂಗಡಿಯಲ್ಲಿ ಕಳಪೆ ಗೊಬ್ಬರ ಮಾರಾಟಗಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಪರವಾನಗಿ ನೀಡಿದ್ದಲ್ಲಿ ಪರೀಶೀಲಿಸಿ ರದ್ದುಪಡಿಸಿ ತಪ್ಪಿತಸ್ಥರನ್ನು ಬಂಧಿಸಬೇಕು.
ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಏ.7ರಂದು ಗ್ರಾಮದಿಂದ ಡಿಸಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಎಸ್ಟಿಎಂಸಿ ಅಧ್ಯಕ್ಷ ಬಿ.ರಾಜು, ಪ್ರಮುಖರಾದ ಬಿ.ಸದಾಶಿವಪ್ಪ, ಸಿ.ಬಾಷಸಾಬ್, ಬೂದಗುಂಪಿ ರಾಜಸಾಬ್ ಎನ್‌ಖಾಸಿಂಸಾಬ್ ಗುಂಡೆಕಲ್ಲು ಬಸವರಾಜ ಎಸ್.ರಾಮಪ್ಪ ಸೇರಿ ಅನೇಕರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 