ಜವಾಹರಲಾಲ್ ನೆಹರೂರವರ ಭಾವಚಿತ್ರಕ್ಕೆ ಪೂಜೆ

ಲೋಕದರ್ಶನ ವರದಿ

ಬೆಟಗೇರಿ:  ಸಮೀಪದ ನಿಂಗಾಪೂರ ಗ್ರಾಮದ ಸಕರ್ಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಗುರುವಾರ ನ.14 ರಂದು ಮಕ್ಕಳ ದಿನಾಚರಣೆ ಸಂಭ್ರಮದಿಂದ ನಡೆಯಿತು. ಶಾಲೆಯ ಮುಖ್ಯ ಶಿಕ್ಷಕ ಐ.ಸಿ.ಕೊಣ್ಣೂರ ಅವರು, ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಿ, ಮಕ್ಕಳ ದಿನಾಚರಣೆ ಕುರಿತು ಮಾತನಾಡಿದರು. ನಿವೃತ್ತ ಮುಖ್ಯ ಶಿಕ್ಷಕ ಎಂ.ಎಲ್.ವಗ್ಗರ, ಎಸ್.ವೈ.ಪಾಟೀಲ, ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಗಣ್ಯರು, ಇತರರು ಇದ್ದರು. 

ಬೆಟಗೇರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆ: ಬೆಟಗೇರಿ ಗ್ರಾಮದ ಸಕರ್ಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಗುರುವಾರದಂದು ಮಕ್ಕಳ ದಿನಾಚರಣೆ ನಡೆಯಿತು. ಹೆಣ್ಣು ಮಕ್ಕಳ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಮೇಶ ನೀಲಣ್ಣವರ ಅವರು, ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಿ, ಮಕ್ಕಳ ದಿನಾಚರಣೆ ಕುರಿತು ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ, ಆರ್.ಬಿ.ಬೆಟಗೇರಿ, ಗಂಡು ಮಕ್ಕಳ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಉದ್ದಪ್ಪ ಚಂದರಗಿ, ಉಭಯ ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಗಣ್ಯರು, ಇತರರು ಇದ್ದರು. 

ಪತ್ರೇಪ್ಪನ ತೋಟದ ಶಾಲೆ: ಬೆಟಗೇರಿ ಗ್ರಾಮದ ಪತ್ರೇಪ್ಪನ ತೋಟದ ಸಕರ್ಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಗುರುವಾರದಂದು ಮಕ್ಕಳ ದಿನಾಚರಣೆ ನಡೆಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವಿಠಲ ಕೋಣಿ ಅವರು, ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಿ, ಮಕ್ಕಳ ದಿನಾಚರಣೆ ಕುರಿತು ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕ ಬಿ.ಎ.ಕೋಟಿ, ಹನುಮಂತ ಕಟ್ಟಿಮನಿ, ಶ್ರೀಕಂಠಯ್ಯ ಮಠಪತಿ, ಎಸ್.ಜಿ.ಗುಡಸಿ, ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಗಣ್ಯರು, ಇತರರು ಇದ್ದರು.