ಲಿಂಗಾಯತ ಪಂಚಮಸಾಲಿ ಎಂದು ಬರೆಸಿ:ವಿ ಎಚ್ ಬಿರಾದಾರ
Write as Lingayat Panchamasali: VH Biradar
ಇಂಡಿ 21: ಪಂಚಮಸಾಲಿ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಕಡ್ಡಾಯವಾಗಿ ಲಿಂಗಾಯತ ಪಂಚಮಸಾಲಿ ಎಂದು ನಮೂದು ಮಾಡಬೇಕು. ಕೋಡ್ ಇದ್ದಲ್ಲಿ ಎ-0868 ಎಂದು ಬರೆಸಬೇಕು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ತಾಲೂಕಾ ಅಧ್ಯಕ್ಷ ವಿ.ಹೆಚ್. ಬಿರಾದಾರ ಹೇಳಿದರು.
ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮೀಜಿ ಅವರು ಸಮಾಜದ ಮುಖಂಡರೊಂದಿಗೆ ಚರ್ಚಿಸಿ, ನಿರ್ಣಯ ಕೈಗೊಂಡಿರುವುದಾಗಿ ತಿಳಿಸಿದ್ದು ಅವರ ಆಜ್ಞೆಯಂತೆ ನಾವೆಲ್ಲ.
ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಬೇಕೆಂದು ಮನವಿ ಮಾಡಿದರು.ಕೂಡಲಸಂಗಮ ಶ್ರೀಗಳು ಸಮಾಜ ಒಗ್ಗಟ್ಟು ಮಾಡಿ, ನಮ್ಮ ಮಕ್ಕಳಿಗೆ ಮೀಸಲಾತಿ ಕಲ್ಪಿಸುವ ವಿಚಾರವಾಗಿ ಸತತ ಹೋರಾಟ ಮಾಡುತ್ತಿದ್ದಾರೆ. ಅವರ ಬೆನ್ನಿಗೆ ಇಡೀ ಸಮಾಜ ನಿಂತಿದೆ. ಹೀಗಾಗಿ ಶ್ರೀಗಳು ಏನು ಹೇಳುತ್ತಾರೆ ಅದರಂತೆ ಜಾತಿ ಸಮೀಕ್ಷೆಯಲ್ಲಿ ನಮೂದಿಸಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಎಂ.ಆರ್.ಪಾಟೀಲ, ಜೀತಪ್ಪ ಕಲ್ಯಾಣಿ, ಶಿವಾನಂದ ಚಾಳೀಕಾರ, ಅಶೋಕಗೌಡ ಪಾಟೀಲ ಮತ್ತಿತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 