ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಯಶಸ್ಸು ನಿಮ್ಮದಾಗಲಿ : ಪಟೇಲ್

ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಯಶಸ್ಸು ನಿಮ್ಮದಾಗಲಿ : ಪಟೇಲ್  Write the exam with confidence and success will be yours: Patel

ಕೊಪ್ಪಳ 18: ಯಾವುದೇ ಒತ್ತಡಕ್ಕೆ ಒಳಗಾಗದೆ ಧೈರ್ಯ ಮತ್ತು ಶಾಂತತೆಯಿಂದ ಇದ್ದುಕೊಂಡು ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಯಶಸ್ಸು ನಿಮ್ಮದಾಗಲಿ ಎಂದು ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು, ಈ ಕುರಿತು ಹೇಳಿಕೆ ನೀಡಿದ ಅವರು ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಅವರಿಗೆ ಶುಭ ಹಾರೈಸಿ ಮಾತನಾಡಿ ಪರೀಕ್ಷೆಯಲ್ಲಿ ಬರುವ ಪ್ರಶ್ನೆಗಳಿಗೆ ಸಮಂಜಸವಾದ ರೀತಿಯಲ್ಲಿ ಉತ್ತರ ಬರೆದು ಯಶಸ್ವಿಯಾಗಿ ಮುಂದಿನ ತಮ್ಮ ಭವಿಷ್ಯ ಉಜ್ವಲ ಗೊಳಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಿ ಸಂಪೂರ್ಣ ಆತ್ಮ ವಿಶ್ವಾಸದೊಂದಿಗೆ ಪರೀಕ್ಷೆ ಬರೆದು ಜಯ ತಮ್ಮದಾಗಿಸಿ ಕೊಳ್ಳಲು ವಿದ್ಯಾರ್ಥಿಗಳಿಗೆ ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ರವರು ಸಲಹೆ ನೀಡಿ ಶುಭ ಹಾರೈಸಿದ್ದಾರೆ ಈ ಸಂದರ್ಭದಲ್ಲಿ ಅವರೊಂದಿಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಹ ಪಾಲ್ಗೊಂಡು ಎಸ್ ಎಸ್‌ಎಲ್ಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ,