ದಲಿತ ಸಂಘರ್ಷ ಸಮಿತಿ ತಾಲೂಕು ಪದಾಧಿಕಾರಿಗಳ ಆಯ್ಕೆ
Yamanurappa Banakar elected as new president
“ ನೂತನ ಅಧ್ಯಕ್ಷರಾಗಿ ಯಮನೂರಪ್ಪಾ ಬಣಕಾರ ಆಯ್ಕೆ ”
ಯಲಬುರ್ಗಾ 25 : ದಲಿತ ಸಂಘರ್ಷ ಸಮಿತಿ ( ಚಂದ್ರಕಾಂತ್ ಎಸ್ ಕದ್ರೊಳ್ಳಿ ಬಣ್ಣ ) ಯಲಬುರ್ಗಾ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಯಮನೂರಪ್ಪಾ ಬಣಕಾರ ಉಪಾಧ್ಯಕ್ಷರು ವೀರೇಶ್ ದೊಡ್ಡಮನಿ ಪ್ರಧಾನ ಕಾರ್ಯದರ್ಶಿ ಪ್ರಭು ದೊಡ್ಡಮನಿ ಗೌರವಾಧ್ಯಕ್ಷ ಮಂಜುನಾಥ್ ನಡಲುಕೇರಿ ಸಂಚಾಲಕರು ರವಿ ಬಂಡ್ಯಾಳ್ ಖಜಾಂಸೆ ಪರಶುರಾಮ್ ನಡಲುಕೇರಿ ಯುವ ಘಟಕದ ಅಧ್ಯಕ್ಷರು ಶಂಕರ್ ಬಣಕಾರ್ ಉಪಾಧ್ಯಕ್ಷರು ಬಸವರಾಜ ಅಳಗುಂಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಿಂಗರಾಜ್ ಬೆಣಕಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ನೂತನ ಅಧ್ಯಕ್ಷ ಯಮನೂರ್ಪ ಬಣಕಾರ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ, ಶೋಷಿತ ವರ್ಗದ ದ್ವನಿಯಾಗಿ ಸಂಘಟನೆಯನ್ನು ಹುಟ್ಟುಹಾಕಲಾಗಿದೆ. ಸಂಘಟನೆ ಶೋಷಿತರ ಪರವಾಗಿ ಕೆಲಸ ಮಾಡಲಿದೆ ಎಂದರು. ಈ ವೇಳೆ ಜಿಲ್ಲಾ ಘಟಕದ ಉಪಾಧ್ಯಕ್ಷರು ಗಾಳೇಶ್ ಮಕ್ಕಳಿಗೆ ಪ್ರಧಾನ ಕಾರ್ಯದರ್ಶಿ ಕರಿಯಪ್ಪ ಮಣ್ಣಿನವರು ಮಹಿಳಾ ಜಿಲ್ಲಾ ಅಧ್ಯಕ್ಷರು ಶಶಿಕಲಾ ಮಠದ ಸೇರಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 