ಯರಗಟ್ಟಿ: ವಿದ್ಯಾರ್ಥಿಗಳ ಬಸ್ ಸೌಲಭ್ಯಕ್ಕಾಗಿ ಪ್ರತಿಭಟನೆ
Yaragatti: Protest over bus facilities for students
ಯರಗಟ್ಟಿ 7: ಸಮೀಪದ ಯರಗಟ್ಟಿ ಗ್ರಾಮದ ಬಸವೇಶ್ವರ ವೃತ್ತದ ಬಳಿ ಕೆಎಸ್‌ಆರ್ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು. ಯರಗಟ್ಟಿ ಗ್ರಾಮದಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಬೈಲಹೊಂಗಲ ಪಟ್ಟಣಕ್ಕೆ ತೆರಳುತ್ತಾರೆ. ಆದರೆ ಗ್ರಾಮಕ್ಕೆ ಸಮರ್ಕ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ಎದುರಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಬೈಲಹೊಂಗಲದಿಂದ ಹೊರಡುವ ಬಸ್ ಯರಗಟ್ಟಿ ಮಾರ್ಗವಾಗಿ ಕಡಬಿ ಶಿವಾಪುರಕ್ಕೆ ತೆರಳುತ್ತದೆ. ಈ ವೇಳೆ ಯರಗಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬಸ್ ಹತ್ತಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬಸ್ನಲ್ಲಿ ಸ್ಥಳಾವಕಾಶ ಇಲ್ಲದೆ ಅನೇಕ ಬಾರಿ ವಿದ್ಯಾರ್ಥಿಗಳು ಬಾಗಿಲಿಗೆ ಜೋತು ಬೀಳುವಂತಾಗಿದ್ದು, ಅಪಘಾತದ ಆತಂಕ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು.
ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸೋಮವಾರ ಬೈಲಹೊಂಗಲ ಡಿಪೋಗೆ ಸಂಬಂಧಿಸಿದ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಮೂಡಗೋಡ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಡಿಪೋ ವ್ಯವಸ್ಥಾಪಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಮರುದಿನದಿಂದ ಯರಗಟ್ಟಿ ಮಾರ್ಗಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು.
ನಂತರ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು. ಆದರೆ ಭರವಸೆಯಂತೆ ಬಸ್ ಸೌಲಭ್ಯ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ವಿದ್ಯಾರ್ಥಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಸಾರಿಗೆ ಸೌಲಭ್ಯವನ್ನು ಶೀಘ್ರದಲ್ಲೇ ಸುಧಾರಿಸುವಂತೆ ಒತ್ತಾಯಿಸಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 