ಖಳನಾಯಕನ ಪಾತ್ರಕ್ಕಾಗಿ ಅತಿಹೆಚ್ಚು ಸಂಭಾವನೆ ಪಡೆದ ನಟ ಎಂಬ ಹೆಗ್ಗಳಿಕೆ ನಟ ಯಶ್ ಪಾತ್ರರಾಗುತ್ತಿದ್ದಾರೆ.
ರಾಮಾಯಣ ಚಿತ್ರದಲ್ಲಿ ಖಳನಾಯಕನ ಪಾತ್ರಕ್ಕಾಗಿ ಅತಿಹೆಚ್ಚು ಸಂಭಾವನೆ ಪಡೆದ ನಟ ಎಂಬ ಹೆಗ್ಗಳಿಕೆ ಈಗ ಇವರ ಹೆಗಲೇರಿದೆ. ರಾಮಾಯಣ ಚಿತ್ರದಲ್ಲಿ ರಾವಣನ ಪಾತ್ರಕ್ಕೆ ಯಶ್ ಬರೊಬ್ಬರಿ 200 ಕೋಟಿ ರೂ. ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ದೃಷ್ಟಿಯಿಂದ ನೋಡಿದರೆ, ಯಶ್ ಖಳನಟನಾಗಿ ನಟಿಸುತ್ತಿದ್ದಾರೆ. ಖಳನಟ ನೊಬ್ಬ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ಇದೇ ಮೊದಲು ಎನ್ನಲಾಗುತ್ತಿದೆ.
ಸುಮಾರು 1000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ, ನಿತೀಶ್ ತಿವಾರಿ ನಿರ್ದೇಶನದ “ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದಾರೆ.