ಖರ್ಗೆ ಸಿಎಂ ಆಗ್ತಾರೆಂದ ಯತ್ನಾಳ
Yathnal says Kharge will become CM
ಖರ್ಗೆ ಸಿಎಂ ಆಗ್ತಾರೆಂದ ಯತ್ನಾಳ
ಬೆಳಗಾವಿ: ‘ರಾಜ್ಯದ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಲಾಬಿ ಮಾಡುವವರಿಗೆ ಅದು ಸಿಗುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗುತ್ತಾರೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಜಟಾಪಟಿ ಆರಂಭವಾಗಿದೆ. ಪ್ರತಿ ಆಕಾಂಕ್ಷಿ ಲಾಬಿ ನಡೆಸುತ್ತಿದ್ದಾರೆ. ಬೆಂಬಲಿಗರೂ ಅವರ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಚಿತ್ರದಲ್ಲಿ ಕಾಣಿಸುತ್ತಿಲ್ಲ. ಆದರೆ, ರಾಜ್ಯದ ಸಾರಥ್ಯ ಡಾರ್ಕ್‌ಹಾರ್ಸ್‌ಗೆ ಸಿಗಲಿದೆ’ ಎಂದರು.
‘ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆ ಮುಖ್ಯಮಂತ್ರಿ ಆಗಬೇಕೆಂದು ಕಾಯುತ್ತಿದ್ದಾರೆ. ಖರ್ಗೆ ಹೆಸರು ಬಂದಾಗ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರರು ಸ್ಪರ್ಧೆಯಿಂದ ಹೊರಗುಳಿಯುತ್ತಾರೆ’ ಎಂದರು.
‘ಎಂ.ಬಿ.ಪಾಟೀಲ ಸವಾಲು ಸ್ವೀಕಾರ ಮಾಡಿದ್ದೇವೆ. ಸನಾತನ ಧರ್ಮದ ರಕ್ಷಣೆಗಾಗಿ ಬಬಲೇಶ್ವರದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಆರಂಭಿಸುತ್ತೇವೆ. ದಾವಣಗೆರೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಸುತ್ತೇವೆ. ಹಿಂದು ಧರ್ಮದ ಬಗ್ಗೆ ಮಠಾಧೀಶರು, ರಾಜಕಾರಣಿಗಳು ಮಾತನಾಡಿದರೆ, ಅದೇ ದಾಟಿಯಲ್ಲಿ ಉತ್ತರ ಕೊಡುತ್ತೇವೆ’ ಎಂದು ಹೇಳಿದರು.
‘ಕೆಲವು ಮಠಾಧೀಶರು ಬಸವೇಶ್ವರರ ಹೆಸರನ್ನು ಬಳಸಿಕೊಂಡು ನಾಟಕ ಮಾಡುತ್ತಿದ್ದಾರೆ. ಸಮಾಜ ಸುಧಾರಕರಾದ ಬಸವೇಶ್ವರರು ಲಿಂಗಾಯತ ಧರ್ಮ ಸ್ಥಾಪಿಸಿದ ಬಗ್ಗೆ ಯಾವುದೇ ದಾಖಲೆ ಅಥವಾ ಪುರಾವೆಗಳಿಲ್ಲ. ಆದರೆ, ಅವರು ಹಿಂದೂ ಧರ್ಮದಲ್ಲಿನ ಮೌಢ್ಯ ಆಚರಣೆಗಳ ವಿರುದ್ಧ ಕೆಲಸ ಮಾಡಿದರು. ಬಸವೇಶ್ವರರ ಹೆಸರನ್ನು ಬಳಸುವವರು ‘ಪಾದಪೂಜೆ’ ಹೆಸರಿನಲ್ಲಿ ತಮ್ಮ ಪಾದಗಳನ್ನು ತೊಳೆಸಿಕೊಳ್ಳುವುದನ್ನು ನಿಲ್ಲಿಸಬೇಕು. ಸನಾತನ ಧರ್ಮದ ಕೇಸರಿ ಬಿಟ್ಟು ಹಸಿರು ಬಟ್ಟೆ ಧರಿಸಬೇಕು’ ಎಂದು ಹೇಳಿದರು.
‘ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ’ ಎಂದು ಯತ್ನಾಳ ಹೇಳಿದರು.
‘ಬಿಜೆಪಿ ಹೈಕಮಾಂಡ್ ಮತ್ತೆ ನನ್ನನ್ನು ಕರೆಯದಿದಿದ್ದರೆ, ಜೆಸಿಬಿ(ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷ ಸಿದ್ಧವಾಗಿ ಇಟ್ಟುಕೊಂಡಿದ್ದೇನೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 