ಬೆಂಗಳೂರು, ಫೆ 29 : ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಲಾ ಐದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಪತ್ರಕರ್ತರ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಡಿದ ಮನವಿಗೆ ಯಡಿಯೂರಪ್ಪ ಸ್ಪಂದಿಸಿದ್ದಾರೆ.
ಮರಣ ಹೊಂದಿದ ಪತ್ರಕರ್ತರಾದ ಗಜಾನನ ಹೆಗಡೆ, ಬಿ ಆರ್ ರೋಹಿತ್, ರವಿರಾಜ ವಳಲಂಬೆ, ದಿಗಂಬರ ಗರುಡಾ
ಅವರ ಕುಟುಂಬಗಳಿಗೆ ಆರ್ಥಿಕವಾಗಿ ನೆರವಾಗಬೇಕು ಎಂದು ಪತ್ರಕರ್ತರು ಮನವಿ ಸಲ್ಲಿಸಿದರು. ಪತ್ರಕರ್ತರ ಕುಟುಂಬಳಿಗೆ ನೆರವು ಬಿಡುಗಡೆಗೆ ಯಡಿಯೂರಪ್ಪ ಆದೇಶಿಸಿದರು.