ಬೆಂಗಳೂರು,ಫೆ. 13 : ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ರೈತ ಮುಖಂಡರು ರೈತ ಸಂಘಟನೆಗಳ ನಾಯಕರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಬಿ.ಸಿ ಪಾಟೀಲ್, ಪ್ರಭು ಚೌವ್ಹಾಣ್, ರೈತ ಮುಖಂಡರು ಪಾಲ್ಗೊಂಡಿದ್ದರು. ಸಚಿವ ಬಿ.ಸಿ ಪಾಟೀಲ್ ರ ಪುತ್ರಿ ಸೃಷ್ಟಿ ಪಾಟೀಲ್ ಸಹ ಭಾಗಿಯಾಗಿದ್ದು ವಿಶೇಷವಾಗಿತ್ತು.
ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳ ರೈತ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದು, ಅವರೊಂದಿಗೆ ಕೃಷಿ, ನೀರಾವರಿ ಕುರಿತು ಸುಮಾರು ಮೂರು ತಾಸು ಚರ್ಚೆ ಮಾಡಿದ್ದೇನೆ. ಸಭೆಯಲ್ಲಿ ಅವರ ಸಮಸ್ಯೆಗಳನ್ನು ಆಲಿಸಿದ್ದು, ಸಮಸ್ಯೆಗಳಿಗೆ ಪರಿಹಾರ ರೂಪಿಸಲಾಗುವುದು. ರೈತರು ಹೇಳಿದ ಸಲಹೆಗಳನ್ನು ಬಜೆಟ್‌ನಲ್ಲಿ ಕಾರ್ಯರೂಪಕ್ಕೆ ತರುವ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸರೋಜಿನಿ ಮಹಿಷಿ ವರದಿ ಜಾರಿ ಸಂಬಂಧ ವಿಪಕ್ಷಗಳ ಜೊತೆಗೆ ಚರ್ಚೆ ನಡೆಸಿ, ಸರ್ಕಾರದ ಇತಿಮಿತಿಯಲ್ಲಿ ಕೆಲಸ ಮಾಡಲಾಗುವುದು.
ಪ್ರತಿಭಟನಾ ನಿರತರ ಬೇಡಿಕೆಗಳನ್ನು ಸರ್ಕಾರ ಸಕಾರಾತ್ಮಕವಾಗಿ ಬಗೆಹರಿಸಲಿದೆ ಎಂದು ಹೇಳಿದರು.