ಬೆಂಗಳೂರು, ಫೆ.5 ,ಎಂಟು ಬಾರಿ ಶಾಸಕನಾಗಿರುವ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕೊಟ್ಟಿದ್ದಾರೆ ಎಂದು ಶಾಸಕ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ. ಯಡಿಯೂರಪ್ಪ ಅವರ ಭೇಟಿ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ತಮ್ಮನ್ನು ಮಂತ್ರಿ ಮಾಡಿ ಎಂದು ಕೇಳಿಲ್ಲ. ಆದರೆ ನನಗೆ ಸಚಿವ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಸಚಿವನನ್ನಾಗಿ ಮಾಡಿದರೆ ಕೆಲಸಮಾಡುತ್ತೇನೆ. ಇಲ್ಲವಾದರೆ ಶಾಸಕನಾಗಿ ಕೆಲಸ ಮಾಡುತ್ತೇನೆ. ಸಚಿವ ಸ್ಥಾನತ್ಯಾಗ ಮಾಡುವಂತೆ ಯಾರೂ ನನಗೆ ಮನವೊಲಿಸಿಲ್ಲ.ನನಗೆ ಈ ಬಗ್ಗೆ ಯಾರೂ ಮಾತಾಡಿಲ್ಲ. ಹತ್ತು ಜನರು ಸಚಿವರಿಗೆ ಸ್ಥಾನ ನೀಡುವ ಬಗ್ಗೆ ಮಾಹಿತಿ ಇಲ್ಲ ಎಂದರು.