ಬೆಂಗಳೂರು, ನ 9 : ಅಯೋಧ್ಯಾ ಭೂಮಿ ವಿವಾದ ಸಂಬಂಧ ಸರ್ವೋಚ್ಛ ನ್ಯಾಯಾಲಯ ಪ್ರಕಟಿಸಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ತೀಪು ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯ ನೀಡಿರುವ ತೀಪು ಯಾರೊಬ್ಬರ ಸೋಲು ಅಲ್ಲ, ಇದು ಗೆಲುವೂ ಅಲ್ಲ. ಸೋಲು-ಗೆಲುವು ಎಂದು ಯಾರೂ ಭಾವಿಸಬಾರದು. ಯಾರೂ ಉದ್ವೇಗಕ್ಕೆ ಒಳಗಾಗಬಾರದು, ವಿಜೃಂಭಿಸಬಾರದು. ನಾಡಿನಲ್ಲಿ ಶಾಂತಿ, ಸಾಮರಸ್ಯ ಸೌಹಾರ್ದತೆ ಕಾಪಾಡಬೇಕು ಎಂದು ಕರೆ ನೀಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್, ಎಲ್ಲರು ಶಾಂತಿ, ಸೌಹಾರ್ದತೆ ಕಾಪಾಡಬೇಕು. ಅಯೋಧ್ಯೆ ತೀಪು ವಿಚಾರ ಬಗ್ಗೆ ತಾವು ಮಾತನಾಡುವುದಿಲ್ಲ ಎಂದರು.