ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ
Yoga, Pranayama, and Meditation Camp as part of International Yoga Day on June 21st
ಅಥಣಿ, 19 ; ತಾಲೂಕಾ ಆಡಳಿತ, ಪತಂಜಲಿ ಯೋಗ ಪೀಠ ಹರಿದ್ವಾರ ಅಥಣಿ ಶಾಖೆ, ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮುಂಜಾನೆ 6ಗಂಟೆಗೆ ಯೋಗ, ಪ್ರಾಣಾಯಾಮ, ಧ್ಯಾನ ಶೀಬೀರ ಸ್ಥಳೀಯ ಎಸ್.ಎಸ್.ಎಮ್.ಎಸ್ ಕಾಲೇಜ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದರು.
ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಎಲ್ಲರಿಗೂ ಯೋಗ ಶಿಬಿರದಲ್ಲಿ ಪತಂಜಲಿ ಯೋಗ ಪೀಠದ ಅಂತಾರಾಷ್ಟ್ರೀಯ ಯೋಗ ಗುರು ಮತ್ತು ರಾಜ್ಯ ವರೀಷ್ಠ ಪ್ರಭಾರಿಗಳಾದ ಭವರಲಾಲ್ ಆರ್ಯ ಅವರು ಮಾರ್ಗದರ್ಶನ ಮಾಡುವರು ಎಂದ ಅವರು ಅಧ್ಯಕ್ಷತೆಯನ್ನು ಪುರಸಭಾ ಅಧ್ಯಕ್ಷೆ ಶಿವಲೀಲಾ ಬುಟಾಳಿ ವಹಿಸುವರು, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಸಿದರಾಯ ಭೋಸಗಿ, ಅತಿಥಿಗಳಾಗಿ ಡಾ.ಮಲ್ಲಿಕಾರ್ಜುನ ಹಂಜಿ ಆಗಮಿಸುವರು ಎಂದರು. ರೋಗ ಮುಕ್ತ ಮತ್ತು ಸಧೃಢ, ಆರೋಗ್ಯವಂತ ಸಮಾಜ ನಿರ್ಮಾಣದ ಉದ್ದೇಶದಿಂದ ಮತ್ತು ಯೋಗದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದ ಅವರು ಸುಮಾರು 3000 ಸಾವಿರ ಸಾಮಥ್ರ್ಯದ ಈ ಮೈದಾನದಲ್ಲಿ ಯೋಗಾಸಕ್ತರ ಅನಕೂಲಕ್ಕಾಗಿ ಎಲ್.ಇ.ಡಿ ಸ್ಕೀನ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಪತಂಜಲಿ ಯೋಗ ಪೀಠದ ರಾಜ್ಯ ವರೀಷ್ಠ ಪ್ರಭಾರಿ ಭವರಲಾಲ್ ಆರ್ಯ ಮಾತನಾಡಿ, ಯೋಗ ಒಂದು ದಿನದ ಹಬ್ಬ ಆಗಬಾರದು ಇದು ಜೀವನದ ಒಂದು ಭಾಗವಾಗಬೇಕು ಎಂದ ಅವರು ಯೋಗ, ಪ್ರಾಣಾಯಾಮ ಮತ್ತು ಧ್ಯಾನ ಶಿಬಿರವನ್ನು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಉದ್ಘಾಟಿಸುವರು. ಹೆಚ್ಚು ಹೆಚ್ಚು ಜನ ಈ ಯೋಗ ಶಿಬಿರದಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದರು. ಅಥಣಿಯ ಎಲ್ಲ ವಾರ್ಡಗಳಲ್ಲಿ ಒಂದೊಂದು ಯೋಗ ಕೇಂದ್ರ ನಿರ್ಮಿಸುವ ಗುರಿ ನಮ್ಮದಾಗಿದ್ದು, ಈ ನಮ್ಮ ಯೋಜನೆಗೆ ಸ್ಥಳೀಯ ಶಾಸಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಅವರು ಶಿಬಿರದಲ್ಲಿ ಪಾಲ್ಗೊಳ್ಳುವವರು ಸಡಿಲವಾದ ಬಟ್ಟೆ ಧರಿಸಿ ಬರಬೇಕು ಮತ್ತು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವವರು ತಮ್ಮ ವೈದ್ಯರ ಸಲಹೆ ಪಡೆದು ಬರಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಎಸ್.ಕೆ.ಹೊಳೆಪ್ಪನವರ, ಶಿವಾನಂದ ಬುರ್ಲಿ, ಶಿವಾನಂದ ಮಾಲಗಾಂವಿ, ಎ.ಬಿ.ಪಾಟೀಲ, ಬಾಳಕೃಷ್ಣ ಕೊಳೇಕರ, ಅಪ್ಪಾಸಾಹೇಬ ಅಲಿಬಾದಿ, ರಾಮಣ್ಣಾ ಧರಿಗೌಡರ, ಅಪ್ಪಾಸಾಹೇಬ ತಾಂಬಟ, ಡಾ.ವಿನಾಯಕ ಚಿಂಚೋಳಿಮಠ, ಸುರೇಶ ಚಿಕ್ಕಟ್ಟಿ, ಶೇಖರ್ಪ ಗೊರಜನಾಳ, ಸದಾಶಿವ ಮುದಗೌಡರ, ಪುರಸಭಾ ಸದಸ್ಯ ರಾಜಶೇಖರ ಗುಡೋಡಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 