ಯೋಗ, ಧ್ಯಾನ, ಪ್ರಾಣಾಯಾಮದಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ: ಶಿವಲಿಂಗ ಪಟ್ಟಣಶೆಟ್ಟಿ
Yoga, meditation, and pranayama improve concentration and memory power in students: Shivalinga Patta
ಪಾಲಬಾವಿ 23: ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ಅರುಣೋದಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಎಲ್ಲ ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗ ಮಾಡಿದರು. ಯೋಗ ಶಿಕ್ಷಕ ಶಿವಲಿಂಗಪ್ಪ ಪಟ್ಟಣಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಯೋಗ ಪ್ರತಿನಿತ್ಯ ಮಾಡಬೇಕು. ಯೋಗ, ಧ್ಯಾನ, ಪ್ರಾಣಾಯಾಮ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಶಾಂತಿ ಲಭಿಸಿ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ಶಿವಲಿಂಗಪ್ಪ ಪಟ್ಟಣಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಚನ್ನವಿರಾಯ್ಯ ಹಿರೇಮಠ, ಶಿಕ್ಷಕ ಶಾಂತಕುಮಾರ ಬೆಳ್ಳಿಕಟ್ಟಿ, ರಾಮಕೃಷ್ಣ ಬನಾಜ, ಯಲ್ಲಪ್ಪ ಜಕನೂರ, ಗುರುಮಾತೆಯರು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 