ಯೋಗ, ಧ್ಯಾನ, ಪ್ರಾಣಾಯಾಮದಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ: ಶಿವಲಿಂಗ ಪಟ್ಟಣಶೆಟ್ಟಿ

ಯೋಗ, ಧ್ಯಾನ, ಪ್ರಾಣಾಯಾಮದಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ: ಶಿವಲಿಂಗ ಪಟ್ಟಣಶೆಟ್ಟಿ Yoga, meditation, and pranayama improve concentration and memory power in students: Shivalinga Patta

ಪಾಲಬಾವಿ 23:  ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ಅರುಣೋದಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಎಲ್ಲ ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗ ಮಾಡಿದರು.  ಯೋಗ ಶಿಕ್ಷಕ ಶಿವಲಿಂಗಪ್ಪ ಪಟ್ಟಣಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಯೋಗ ಪ್ರತಿನಿತ್ಯ ಮಾಡಬೇಕು. ಯೋಗ, ಧ್ಯಾನ, ಪ್ರಾಣಾಯಾಮ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಶಾಂತಿ ಲಭಿಸಿ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ಶಿವಲಿಂಗಪ್ಪ ಪಟ್ಟಣಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಚನ್ನವಿರಾಯ್ಯ ಹಿರೇಮಠ, ಶಿಕ್ಷಕ ಶಾಂತಕುಮಾರ ಬೆಳ್ಳಿಕಟ್ಟಿ, ರಾಮಕೃಷ್ಣ ಬನಾಜ, ಯಲ್ಲಪ್ಪ ಜಕನೂರ, ಗುರುಮಾತೆಯರು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು.