ಭೀಮಾ ಸೆಂಟ್ರಲ್ ಯೂನಿವರ್ಸಲ್ ಶಾಲೆಯಲ್ಲಿ ಯೋಗಾ ದಿನ ಆಚರಣೆ
Yoga Day celebrated at Bhima Central Universal School
ಸಿಂದಗಿ 22: ಸಿಂದಗಿ ಪಟ್ಟಣದ ಹೊರವಲಯದಲ್ಲಿರುವ ಭೀಮಾ ಸೆಂಟ್ರಲ್ ಯೂನಿವರ್ಸಲ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನವನ್ನು ಆಚರಣೆ ಮಾಡಲಾಯಿತು.
ಸಿಂದಗಿ:ಯೋಗವನ್ನು ಸುಮಾರು ಆರು ಸಾವಿರ ವರ್ಷಗಳ ಹಿಂದೆ ಪಂತಜಲಿ ಋಷಿಗಳು ಪರಿಚಯ ಮಾಡಿಕೊಟ್ಟರು. ಯೋಗದಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢಗೊಳ್ಳುವುದರ ಜೊತೆಗೆ ಸುಂದರ ಬದುಕು ಕಟ್ಟಿಕೊಳ್ಳಬಹುವುದು ಎಂದು ಶಾಲೆಯ ವಿದ್ಯಾರ್ಥಿನಿ ಭಕ್ತಿ ಭುಮನ್ನವರ ಹೇಳಿದರು.
ಸಿಂದಗಿ ಪಟ್ಟಣದ ಹೊರವಲಯದಲ್ಲಿರುವ ಭೀಮಾ ಸೆಂಟ್ರಲ್ ಉನಿವರ್ಸಲ್ ಶಾಲೆಯಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗಾ ದಿನವನ್ನು ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವ ಅವರು, ಯೋಗವು ಎಲ್ಲ ಸಮಸ್ಯೆಗಳಿಗೆ ಪರಿಹಾರ. ಮಾನಸಿಕ ಮತ್ತು ಶಾರೀರಿಕ ಸಮತೋಲನ ಕಾಪಾಡುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಆದ್ದರಿಂದ ಯೋಗವನ್ನು ದೈನಂದಿನ ಚಟುವಟಿಕೆಯಾಗಿ ಮಾಡಿಕೊಳ್ಳುವುದು ರೂಢಿಯಾಗಬೇಕು ಎಂದರು.
ಪ್ರಾಚಾರ್ಯೆ ಶಾಹೀನ್ ಶೇಖ ಮಾತನಾಡಿ, ಯೋಗದಿಂದ ಏಕಾಗ್ರತೆ ಹೆಚ್ಚುವುದರ ಜೊತೆಗೆ ಓದುವ ಕಡೆ ಹೆಚ್ಚಿನ ಗಮನ ಹರಿಸಲು ಸಹಕಾರವಾಗುವುದು ಎಂದರು. ಇದೇ ಸಂದರ್ಭದಲ್ಲಿ ಯೋಗದ ಆಸನಗಳನ್ನು ಪ್ರದರ್ಶನ ಮಾಡುವುದರ ಮೂಲಕ ಗಮನ ಸೆಳೆದರು.
ದೈಹಿಕ ಶೀಕ್ಷಕರಿಂದ ಶಾಲಾ ವಿದ್ಯಾರ್ಥಿಗಳಿಗೆ ಯೋಗದ ಆಸನಗಳಾದ ಸೂರ್ಯ ನಮಸ್ಕಾರ, ತ್ರಿಕೋನಾಸನ, ವೀರಭದ್ರಾಸನ, ಅರ್ಧಚಕ್ರಾಸನ, ವೃಕ್ಷಾಸನ, ದಂಡಾಸನ, ಅರ್ಥನೌಕಾಸನ, ಭದ್ರಾಸನ, ಪಶ್ಚಿಮೋತ್ಥಾಸಾನ, ಉಷ್ಟ್ರಾಸನ ಸೇರಿದಂತೆ ಅನೇಕ ಆಸನಗಳನ್ನು ವಿದ್ಯಾರ್ಥಿಗಳು ಮಾಡಿದರು. ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 