ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ2 ರಲ್ಲಿ ಯೋಗ ದಿನಾಚರಣೆ
Yoga Day celebration at Government Model Primary School No. 2
ಲಕ್ಷ್ಮೇಶ್ವರ" 22 : ಪಟ್ಟಣದ ವಿದ್ಯಾರಣ್ಯ ಸರ್ಕಲ್ ಹತ್ತಿರ ಇರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ2ರಲ್ಲಿ ಭಾನುವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲೆಯ ಎಲ್ಲಾ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳೊಂದಿಗೆ ಯೋಗ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದರು ಯೋಗ ದಿನಾಚರಣೆ ಕುರಿತು ಮಾತನಾಡಿದ ಶಾಲೆಯ ಪ್ರಧಾನ ಗುರುಮಾತೆ ಎಸ್ ಎಚ್ ಉಮಚಗಿ ಅವರು ಪ್ರತಿ ವರ್ಷ ಜೂನ್ 21 ರಂದು ವಿಶ್ವ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಭಾರತದ ಪ್ರಾಚೀನ ಸಂಸ್ಕೃತಿಯಾದ ಯೋಗವು ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ಸುಧಾರಿಸುತ್ತದೆ.
ಇದು ಭಾರತದ ಹೆಮ್ಮೆಯಾಗಿದ್ದು, ಪ್ರಸ್ತುತ ಇಡೀ ಜಗತ್ತೇ ಇದರ ಮಹತ್ವವನ್ನು ಒಪ್ಪಿಕೊಂಡು ಅನುಸರಿಸುತ್ತಿದೆ.ಯೋಗವು ಭಾರತದ ಪ್ರಾಚೀನ ಪರಂಪರೆಯಾಗಿದ್ದು ಇಡೀ ಜಗತ್ತಿಗೆ ಭಾರತ ನೀಡಿರುವ ಅತ್ಯಮೂಲ ಕೊಡುಗೆಯಾಗಿದೆ. ಇದು ಯಾವುದೇ ಧರ್ಮ ಅಥವಾ ಜಾತಿಗೆ ಸೀಮಿತವಾಗಿಲ್ಲ ಮಾನವೀಯತೆಯ ಮತ್ತು ಪ್ರತಿಯೊಬ್ಬರ ಆರೋಗ್ಯ ಕಲ್ಯಾಣಕ್ಕಾಗಿ ಯೋಗ ಅತ್ಯಗತ್ಯ. ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ಆರೋಗ್ಯಕರ ಹಾಗೂ ಶಾಂತಿಯುತ ಜೀವನವನ್ನು ನಡೆಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.
ಯೋಗವು ದೇಹ ಮತ್ತು ಮನಸ್ಸನ್ನು ಹಾಗೂ ಆತ್ಮವನ್ನು ಬೆಸೆಯುತ್ತದೆ. ಆಧುನಿಕ ಒತ್ತಡದ ಜೀವನದಲ್ಲಿ ಯೋಗವು ದೈಹಿಕ ಚೈತನ್ಯ ಮತ್ತು ಮಾನಸಿಕ ನೆಮ್ಮದಿಯನ್ನು ನೀಡುವ ಅತ್ಯುತ್ತಮ ಸಾಧನವಾಗಿದೆ. ಯೋಗದ ಮಹತ್ವ ಮತ್ತು ಪ್ರಯೋಜನಗಳುದೈಹಿಕ ಸದೃಢತೆ ಯೋಗಾಸನಗಳು ದೇಹದ ಮಾಂಸ ಖಂಡಗಳನ್ನು ಬಲಪಡಿಸಿ ನಮ್ಯತೆಯನ್ನು ಹೆಚ್ಚಿಸುತ್ತವೆ ಮಾನಸಿಕ ಶಾಂತಿ ಪ್ರಾಣಾಯಾಮ ಮತ್ತು ಧ್ಯಾನವು ಒತ್ತಡ ಹಾಗೂ ಆತಂಕವನ್ನು ಕಡಿಮೆ ಮಾಡುತ್ತದೆ ಏಕಾಗ್ರತೆ ಯೋಗವು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿ ಯಾಗುವುದರೊಂದಿಗೆ ರೋಗ ನಿರೋಧಕ ಶಕ್ತಿ ನಿಯಮಿತ ಯೋಗಾಭ್ಯಾಸವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ,
ಮಧುಮೇಹ ಹಾಗೂ ರಕ್ತದೊತ್ತಡದಂತಹ ಕಾಯಿಲೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಆ ನಿಟ್ಟಿನಲ್ಲಿ ಎಲ್ಲ ವಿದ್ಯಾರ್ಥಿಗಳು ಬೆಳಗಿನ ಸಮಯದಲ್ಲಿ ಹೆಚ್ಚು ಯೋಗ ಮಾಡುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ವಿಸ್ತಾರವಾಗಿ ತಿಳಿಸಿದರು ಈ ಸಮಯದಲ್ಲಿ ಶಾಲೆಯ ಶಿಕ್ಷಕಿಯರಾದ ಎಸ್‌ಎಸ್ ಜಿರಂಕಳಿ ಪಿ ಎಸ್ ಹವಾಲ್ದಾರಕೆ ಆರ್ ಮುದಕಣ್ಣವರ ಎಲ್ ಎಂ ಆಡ್ನೂರ ಎಲ್ ಎಂ ದುಂಡಪ್ಪನವರ ಸಿ ಎಫ್ ಪಾಟೀಲ್ ಎನ್ ಎಸ್ ಬಂಕಾಪುರ ಸೇರಿದಂತೆ ಶಾಲೆಯಲ್ಲ ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಯೋಗದಲ್ಲಿ ಪಾಲ್ಗೊಂಡಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 