ನಿಸರ್ಗದ ಮಧ್ಯೆ ಸಚಿವದ್ವಯರ ಯೋಗಾ ಯೋಗ..!
ಹಿರೇಕೆರೂರು, ಜೂ.21,ವಿಶ್ವ ಯೋಗ ದಿನ ಅಂಗವಾಗಿ ಭಾನುವಾರ ಮುಂಜಾನೆ ಹಾವೇರಿ ಜಿಲ್ಲೆಯ ಹಿರೇಕೆರೂರಿನ ನಿಸರ್ಗದ ಮಡಿಲಿನಲ್ಲಿ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಯೋಗಭ್ಯಾಸ ಮಾಡಿದರು. ಸುಮಾರು ಒಂದು ಗಂಟೆಗಳ ಕಾಲ ನಿಸರ್ಗದ ಸುಂದರ ವಾತಾವರಣದಲ್ಲಿ ಸಚಿವದ್ವಯರು ಯೋಗದಲ್ಲಿ ನಿರತರಾದರು. ಯೋಗದ ಮೂಲ ಭಾರತ. ಇದನ್ನು ಸಹಸ್ರಾರು ವರ್ಷಗಳಿಂದ ನಮ್ಮ ಪೂರ್ವಜರು ಪಾಲಿಸಿಕೊಂಡು ಬರುತ್ತಿದ್ದಾರೆ. ಯೋಗದ ಮೂಲಕ ಆರೋಗ್ಯವನ್ನು ಕಾಯ್ದುಕೊಂಡಿದ್ದಾರೆ. ಆರೋಗ್ಯ ಹಾಗೂ ಆಯಸ್ಸನ್ನು ವೃದ್ಧಿಗೊಳಿಸುವ ಶಕ್ತಿ ಯೋಗಕ್ಕಿದೆ. ಅಲ್ಲದೆ, ಅನೇಕ ರೋಗಗಳನ್ನು ಇದು ಗುಣಪಡಿಸುವುದಲ್ಲದೆ, ಕೆಲವು ರೋಗಗಳು ನಮ್ಮ ಹತ್ತಿರಕ್ಕೂ ಬಾರದಂತೆ ತಡೆಯುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಯೋಗ ಬಲ್ಲವನಿಗೆ ರೋಗ ಇಲ್ಲ ಎಂಬ ನಾಣ್ಣುಡಿ ಸುಮ್ಮನೆ ಹುಟ್ಟಿಕೊಂಡಿಲ್ಲ. ನಾವು ಯೋಗ ದಿನದಂದು ಮಾತ್ರ ಯೋಗ ಮಾಡಿದರೆ ಸಾಲದು ಅದು ನಮ್ಮ ದೈನಂದಿನದ ಕಾರ್ಯಚಟುವಟಿಕೆಯ ಭಾಗವಾಗಬೇಕು. ಪ್ರತಿ ದಿನ ಯೋಗ ಮಾಡುವುದರಿಂದ ದೇಹ ಹಾಗೂ ಮನಸ್ಸು ಉಲ್ಲಸಿತವಾಗಿರುತ್ತದೆ ಎಂದು ಸಚಿವ ಸೋಮಶೇಖರ್ ಹೇಳಿದರು.ಯೋಗದ ನಿಜವಾದ ಪ್ರಯೋಜನ ಅರಿತವರು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೆಂದರೆ ಅತಿಶಯೋಕ್ತಿ ಆಗಲಾರದು. ಅವರು ಯೋಗದ ಮಹತ್ವವನ್ನು ಚೆನ್ನಾಗಿ ಅರಿತಿದ್ದರಿಂದಲೇ ಪ್ರತಿದಿನ ಯೋಗ ಮಾಡುತ್ತಾರೆ. ಅಲ್ಲದೆ, ಯೋಗಕ್ಕೆ ವಿಶ್ವದೆಲ್ಲೆಡೆ ಮನ್ನಣೆ ಸಿಗುವಂತೆ ಮಾಡಿದ್ದಾರೆಂದು ಸಚಿವರಾದ ಸೋಮಶೇಖರ್ ತಿಳಿಸಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 