ಯೋಗದಿಂದ ದೈಹಿಕ ಆರೋಗ್ಯ ಮಾನಸಿಕ ಶಾಂತಿ ಸಾಧ್ಯ: ಎ.ಎಸ್. ಕಂದಗಲ್
Yoga can provide physical health and mental peace: A.S. Kandagal
ಲೋಕದರ್ಶನ ವರದಿ
ಜಮಖಂಡಿ 21 : ಯೋಗವು ದೇಹ, ಮನಸ್ಸು ಮತ್ತು ಆತ್ಮವನ್ನು ಸಮನ್ವಯಗೊಳಿಸಿ ಆರೋಗ್ಯ ಕಾಪಾಡಿಕೊಳ್ಳುವ ಮತ್ತು ಆಂತರಿಕ ಶಾಂತಿಯನ್ನು ಅನುಭವಿಸುವ ಒಂದು ಜೀವನ ಪದ್ಧತಿಯಾಗಿದೆ ಎಂದು ಯೋಗಗುರು ನಿವೃತ್ತ ಪ್ರಾಧ್ಯಾಪಕ ಎ.ಎಸ್. ಕಂದಗಲ ಹೇಳಿದರು. ನಗರದ ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 12ನೇ ವಿಶ್ವಯೋಗ ದಿನಾಚರಣೆಯಲ್ಲಿ ಯೋಗಾಸನಗಳ ಪ್ರಾತ್ಯಕ್ಷಿಕೆ ನೀಡಿ ಅದರ ಮಹತ್ವ ಕುರಿತು ಮಾತನಾಡಿದ ಅವರು, ಸೂರ್ಯ ನಮಸ್ಕಾರ ಮಾಡುವುದರಿಂದ ರಕ್ತಸಂಚಲನ ಸುಧಾರಿಸುತ್ತದೆ, ದೇಹದ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ ಎಂದರು.
ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ಮಾತನಾಡಿ, ಮನಸ್ಸಿನ ಏಕಾಗ್ರತೆ ಸಾಧಿಸಲು ಮತ್ತು ಸ್ಮರಣಶಕ್ತಿಯನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ದಿನನಿತ್ಯ ಯೋಗ ಮಾಡಬೇಕು ಎಂದರು. ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಡಾ.ಗೀರೀಶ ಕಡ್ಡಿ, ಮುಖ್ಯ ಶಿಕ್ಷಕ ಪಿ.ಐ. ಹೊಸಮಠ ಇದ್ದರು. ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ದಿನಾಚರಣೆಯ ಯಶಸ್ಸಿಗೆ ಶ್ರಮಿಸಿದರು. ಸಂಭ್ರಮ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. 5ನೇ ತರಗತಿ ಮಕ್ಕಳು ಸಾಮೂಹಿಕ ಯೋಗ ಪ್ರದರ್ಶನ ನೀಡಿದರು. ವಿಮಲಾ ಚೌಧರಿ, ಆರಾಧ್ಯ ಬಳ್ಳೂರಗಿ ನಿರೂಪಿಸಿದರು. ಶ್ರೀದೇವಿ ಬಡಿಗೇರ ವಂದಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 