ಯೋಗ ಶಿಸ್ತು ಮತ್ತು ಭೌದ್ದಿಕ ಬೆಳವಣಿಗೆಗೆ ಸಹಕಾರಿಯಾಗಿದೆ : ಗವಿಶಂಕರ್
Yoga helps in discipline and intellectual growth: Gavishankar
ಕೊಪ್ಪಳ 22: ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ ಕೊಡುಗೆಯಾದ ಯೋಗವು ದೈಹಿಕ ಮತ್ತು ಮಾನಸಿಕ ಯೋಗಕ್ಷೇಮವನ್ನು ಹೆಚ್ಚಿಸುವ ಅತ್ಯಂತ ವಿಶ್ವಾಸಾರ್ಹ ಸಾಧನಗಳಲ್ಲಿ ಒಂದಾಗಿದೆ. ಹಾಗೂ ಯೋಗವು ಮನಸ್ಸು ಮತ್ತು ದೇಹದ ಏಕತೆಯನ್ನು ಪ್ರತಿಬಿಂಬಿಸುತ್ತದೆ. ಹಾಗೂ ಯೋಗದಿಂದ ವಿದ್ಯಾರ್ಥಿಗಳಿಗೆ ದೈಹಿಕವಾಗಿ, ಮಾನಸಿಕವಾಗಿ ಮತ್ತು ಬೌದ್ಧಿಕ ಬೆಳವಣಿಗೆಯ ಜೊತೆಗೆ ಉತ್ತಮ ಜೀವನಶೈಲಿ ಮತ್ತು ಶಿಸ್ತು ಪರಿಪಾಲನೆಗೆ ಸಹಕಾರಿ ಯಾಗುತ್ತದೆ ಎಂದು ಕೈಗಾರಿಕಾ ತರಬೇತಿ ಸಂಸ್ಥೆಯ ಉಪನಿರ್ದೇಶಕ ಗವಿ ಶಂಕರ್ ಹೇಳಿದರು, ಅವರು ಯೋಗ ದಿನಾಚರಣೆ ನಿಮಿತ್ತ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಯೋಗ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು, ಮುಂದುವರಿದು ಮಾತನಾಡಿ ಯೋಗ ಪ್ರಾಣಾಯಾಮ ಧ್ಯಾನ ಮಾಡುವುದರ ಮೂಲಕ ಮನಸ್ಸು ಸದೃಢವಾಗಿ ಇಟ್ಟುಕೊಳ್ಳಬೇಕು ದೈಹಿಕ ಸದೃಢತೆಗೆ ಯೋಗ ಅತ್ಯಂತ ಮಹತ್ವದ್ದಾಗಿದೆ ಪ್ರತಿಯೊಬ್ಬರು ಯೋಗ ಮಾಡಬೇಕು ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಕೈಗಾರಿಕೆ ತರಬೇತಿ ಸಂಸ್ಥೆಯ ಉಪನಿರ್ದೇಶಕ ಗವಿ ಶಂಕರ್ ಹೇಳಿದರು, ಈ ಸಂದರ್ಭದಲ್ಲಿ ಸಂಸ್ಥೆಯ ಇತರ ಅಧಿಕಾರಿಗಳು ತರಬೇತಿದಾರರು ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 