ವಿದ್ಯಾರ್ಥಿಗಳ ಏಕಾಗ್ರತೆಗೆ ಯೋಗ ಅತ್ಯಗತ್ಯ
Yoga is essential for students' concentration
ಕಾರಟಗಿ ನವನಗರ್ 21 : ಇಲ್ಲಿನ ಪ್ರಮುಖ ವಿದ್ಯಾಸಂಸ್ಥೆಯಾದ ಕಮ್ಮವಾರಿ ಶಿಕ್ಷಣ ಸಂಸ್ಥೆಯ ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತು.ವಿದ್ಯಾರ್ಥಿಗಳಲ್ಲಿ ದೈಹಿಕ ಶಕ್ತಿ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಸದಾಶಯದೊಂದಿಗೆ, ಕಳೆದ ಒಂದು ವಾರದಿಂದ ಶಾಲೆಯಲ್ಲಿ ವಿಶೇಷ ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಪತಂಜಲಿ ಯೋಗ ಸಂಸ್ಥೆಯ ತರಬೇತುದಾರರಾದ ಚಿಟ್ಟೂರಿ ಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ಸತತವಾಗಿ ಯೋಗದ ವಿವಿಧ ಆಸನಗಳು ಮತ್ತು ಪ್ರಾಣಾಯಾಮದ ತರಬೇತಿ ನೀಡಿದ್ದರು. ಈ ಯಶಸ್ವಿ ಒಂದು ವಾರದ ಯೋಗ ಶಿಬಿರದ ಮುಕ್ತಾಯದ ಅಂಗವಾಗಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರು ಕೊಲ್ಲಾ ಶೇಷಗಿರಿರಾವ್ ಭಾಗವಹಿಸಿ ಮಾತನಾಡಿ ಕಮ್ಮವಾರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೊಲ್ಲಾ ಶೇಷಗಿರಿರಾವ್ ಅವರು, "ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಯೋಗದ ಪಾತ್ರ ಅಪಾರವಾಗಿದೆ. ಯೋಗವು ಕೇವಲ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದಷ್ಟೇ ಅಲ್ಲದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ನೆನಪಿನ ಶಕ್ತಿ ಮತ್ತು ಮಾನಸಿಕ ನೆಮ್ಮದಿಯನ್ನು ವೃದ್ಧಿಸುತ್ತದೆ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ತಮ್ಮ ದಿನನಿತ್ಯದ ಜೀವನದ ಭಾಗವಾಗಿಸಿಕೊಳ್ಳಬೇಕು," ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಿಸ್ತುಬದ್ಧವಾಗಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಶ್ರೀಮನ್ ನಾರಾಯಣ, ಋಖಇ ವಿಭಾಗದ ಪ್ರಾಂಶುಪಾಲರಾದ ಶ್ರೀ ಮುರಳಿ ಕೃಷ್ಣ,, ಪ್ರಾಚಾರ್ಯ ಡಾ.ಮಹಮ್ಮದ್ ರಫೀಕ್ ಏಖಖ ಸಂಸ್ಥೆಯ ಸಂಯೋಜಕಿ ಶ್ರೀದೇವಿ ಕೊಲ್ಲಾ ಸೇರಿದಂತೆ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 