ಯೋಗವು ದೈಹಿಕ, ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು: ಡಾ ಭೀಮಾಶಂಕರ ಕನ್ನೂರ
Yoga is good for physical and mental health: Dr. Bhimashankar Kannur
ಇಂಡಿ 21: ಯೋಗವು ದೈಹಿಕ ಹಾಗೂ ಮಾನಸಿಕ ದೃಢತೆಯನ್ನು ಬಲಪಡಿಸುವ ಒಂದು ಸಾಧನವಾಗಿದೆ. ಆದ್ದರಿಂದ ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳುವುದು ಒಳ್ಳೆಯದು ಎಂದು ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ಹೇಳಿದರು.
ಅವರು ಇಂಡಿ ತಾಲೂಕಿನ ಚವಡಿಹಾಳ, ಅಂಜುಟಗಿ, ನಿಂಬಾಳ ಕೆ ಡಿ, ಬಸನಾಳ, ಝಳಕಿ, ಹಿಂಗಣಿ, ಬಬಲಾದ, ಕಪನಿಂಬರಗಿ ಹಾಗೂ ಕೋಳೂರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ನಿರ್ಮಾಣಗೊಂಡ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತವು ವಿಶ್ವಕ್ಕೆ ಯೋಗದ ಮೂಲಕ ಶಾಂತಿಯನ್ನು ರಫ್ತು ಮಾಡಿದೆ. ಜೀವನದಲ್ಲಿ ಯೋಗವನ್ನು ಅಳಪಡಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಸದೃಢ ಆರೋಗ್ಯ ಹೊಂದಲು ಯೋಗ ಸಹಕಾರಿಯಾಗಿದ್ದು, ರೋಗಗಳಿಂದಲೂ ದೂರವಿರಬಹುದು. ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಹಾಗೂ ಜಲ ಸಂರಕ್ಷಣೆ ಕುರಿತು ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲಾಯಿತು.
ಇಂಡಿ ತಾಲೂಕು ಪಂಚಾಯಿತಿ ನಿರ್ದೇಶಕ ಸಂಜು ಖಡಗೇಕರ ಅವರು ಮಾತನಾಡಿ ದಿನನಿತ್ಯ ಯೋಗ ರೂಢಿಸಿಕೊಳ್ಳುವುದರಿಂದ ಮನುಷ್ಯ ಹೆಚ್ಚು ಶಕ್ತಿದಾಯಕವಾಗಿ ಇರುತ್ತಾನೆ ಹಾಗೂ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ. ಹಾಗಾಗಿ ಉತ್ತಮ ಆರೋಗ್ಯಕ್ಕಾಗಿ ಯೋಗವನ್ನು ನಾವು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದರು. ಮತ್ತು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಘೋಷ ವಾಕ್ಯ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎನ್ನುವುದಾಗಿದೆ ಎಂದು ಹೇಳಿದರು.
ವಿವಿಧ ಪಂಚಾಯಿತಿಗಳ ಅಬಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 