ಯೋಗದಿಂದ ದೇಹ-ಮನಸ್ಸೂ ಒಗ್ಗೂಡುತ್ತದೆ : ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು

ಯೋಗದಿಂದ ದೇಹ-ಮನಸ್ಸೂ ಒಗ್ಗೂಡುತ್ತದೆ : ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು Yoga unites body and mind: District Magistrate and Sessions Judge

ಲೋಕದರ್ಶನ ವರದಿ 

        ವಿಜಯಪುರ 21: ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸು ಒಗ್ಗೂಡುತ್ತದೆ. ನಿತ್ಯ ಯೋಗ ಮಾಡುವುದರಿಂದ ಆರೋಗ್ಯ ಸುಧಾರಿಸಿಕೊಳ್ಳುವುದಲ್ಲದೆ, ಸದೃಢರಾಗಿ ಇರಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಹರೀಶ ಎ. ಹೇಳಿದರು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಆರ್‌.ಕೆ.ಎಮ್ ಸಮೂಹ ಸಂಸ್ಥೆಗಳು, ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘದ ಸಹಯೋಗದಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವರ್ಷ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಯೋಗ ದಿನ ಆಚರಿಸಲಾಗುತ್ತಿದೆ. ನಿತ್ಯ ಯೋಗ ಮಾಡುವುದರಿಂದ ಯಾವುದೇ ರೋಗ-ರುಜಿನಗಳು ತಡೆಗಟ್ಟಬಹುದಾಗಿದೆ ಎಂದರು. 

ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ ಮಾತನಾಡಿ, ನಿತ್ಯ ಯೋಗ ಮಾಡುವುದು ಒಳ್ಳೆಯದು. ದಿನಾಲು ಯೋಗ ಮಾಡುವುದರಿಂದ ಎಲ್ಲರೂ ಆರೋಗ್ಯವಂತರಾಗಿ ಇರಬಹುದು ಎಂದರು. ಆರ್‌ಕೆಎಂ ಸಮೂಹ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ​‍್ೂರಮಠ ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ  ರಿಯಾಯತಿ ದರದಲ್ಲಿ ಉಚಿತ ಸೇವೆ ಸಲ್ಲಿಸುತ್ತಿದ್ದೇವೆ. ಇದರ ಸದುಪಯೋಗ ಸಾರ್ವಜನಿಕರು  ಪಡೆದುಕೊಳ್ಳಬೇಕೆಂದು ತಿಳಿಸಿದರು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ  ಹಾಗರಗಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಯೋಗ ತರಬೇತುದಾರರಾಗಿ ರಮೇಶ ದಿನ್ನಿ,  ಸಾವಿತ್ರಿ ಪಿ. ಜಲಗಾರ, ಯೋಗಾ ತರಬೇತುದಾರರು ಮತ್ತು ಶ್ರೀಕಾಂತ ಕುಲಕರ್ಣಿ, ಸ್ವಯಂ ಸೇವಕರು ಯೋಗಾಭ್ಯಾಸ ಹೇಳಿಕೊಟ್ಟರು. ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು, ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರುಗಳು, ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂದಿ ಮತ್ತು ಆರ್‌.ಕೆ.ಎಮ್ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಪಾಲ್ಗೊಂಡು ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.