ಕೋರೆ ಕುಟುಂಬದ ಸೇವಾ ಪರಂಪರೆ ಮುಂದುವರಿಸಲು ಯುವ ನಾಯಕರು ರಾಜಕೀಯಕ್ಕೆ ಬರಬೇಕು : ಬಸವರಾಜ ಪಾಟೀಲ
Young leaders must enter politics to carry forward the Kore family's legacy of service: Basavaraj Pa
ಲೋಕದರ್ಶನ ವರದಿ
ಮಾಂಜರಿ 11 : ಸ್ವಾತಂತ್ರ್ಯ ಪೂರ್ವ ಕಾಲದಿಂದ ಇಂದಿನವರೆಗೂ ಅಂಕಲಿ ಭಾಗದ ಸಾಮಾಜಿಕ, ಸಹಕಾರಿ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಕೋರೆ ಕುಟುಂಬ ಅಪಾರ ಸೇವೆ ಸಲ್ಲಿಸಿದೆ. ಅವರ ಕಾರ್ಯಗಳಿಂದ ಅಂಕಲಿ ಗ್ರಾಮದ ಕೀರ್ತಿ ರಾಜ್ಯಾದ್ಯಂತ ಹರಡಿದೆ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಬಸವರಾಜ ಪಾಟೀಲ ಹೇಳಿದರು.
ಅವರು ಶನಿವಾರ ಅಂಕಲಿಯಲ್ಲಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಅವರ 61ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರ ರಾಜಕೀಯ ಪರಂಪರೆಯನ್ನು ಮುಂದುವರಿಸಲು ಚಿದಾನಂದ ಬಸಪ್ರಭು ಕೋರೆ, ಮಲ್ಲಿಕಾರ್ಜುನ ಕೋರೆ ಅಥವಾ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಅಮಿತ್ ಕೋರೆ ಅವರು ಸಕ್ರಿಯ ರಾಜಕೀಯಕ್ಕೆ ಬರಬೇಕು ಎಂಬುದು ತಮ್ಮ ಅಭಿಪ್ರಾಯವಾಗಿದೆ ಎಂದು ಬಸವರಾಜ ಪಾಟೀಲ ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ನಾಗಯ್ಯ ಹಿರೇಮಠ ಅತಿಥಿಗಳನ್ನು ಸ್ವಾಗತಿಸಿದರು. ಬಳಿಕ ಶಿವಾಲಯದ ಆವರಣದಲ್ಲಿ ಗಣ್ಯರ ಸಮ್ಮುಖದಲ್ಲಿ ಸಸಿ ನೆಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ವೇದಿಕೆಯಲ್ಲಿ ಶುಭಾಂಗಿ ಕೋರೆ, ಕಾರ್ಖಾನೆ ನಿರ್ದೇಶಕ ಭರತೇಶ ಬನವಣೆ, ವ್ಯವಸ್ಥಾಪಕ ನಿರ್ದೇಶಕ ಬಿ.ಆರ್. ಖಂಡಗಾವೆ, ಅಜಿತರಾವ್ ದೇಸಾಯಿ, ಪ್ರಭಾಕರ ಕೋರೆ ಕೋ-ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಮಹಾಂತೇಶ ಪಾಟೀಲ, ಡಾ. ಆರಿ್ಡ. ಗಿಜರೆ, ಶೈಲಜಾ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗಣ್ಯರು ಮಲ್ಲಿಕಾರ್ಜುನ ಕೋರೆ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮವನ್ನು ಶಿಕ್ಷಕ ಜಕಾತೆ ನಿರೂಪಿಸಿದರು. ಶಿವಾಲಯದ ವ್ಯವಸ್ಥಾಪಕ ನಾಗೇಶ ಮಜುಕರ ವಂದಿಸಿದರು.
ಕಾರ್ಯಕ್ರಮದಲ್ಲಿ ಕಾರ್ಖಾನೆ ನಿರ್ದೇಶಕರು, ಸಹಕಾರಿ ಸಂಸ್ಥೆಗಳ ಪದಾಧಿಕಾರಿಗಳು, ರೈತ ಮುಖಂಡರು ಹಾಗೂ ಅಂಕಲಿ, ಚಿಕ್ಕೋಡಿ, ಅಥಣಿ ಮತ್ತು ರಾಯಬಾಗ ತಾಲೂಕುಗಳ ಕಬ್ಬು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 