ಕನ್ನಡವನ್ನು ಕಟ್ಟುವ ನಿಟ್ಟಿನಲ್ಲಿ ಯುವ ಮನಸ್ಸುಗಳು ಮಿಡಿಯಬೇಕು : ರವಿ ಕಮಡೊಳ್ಳಿ
Young minds should be engaged in building Kannada: Ravi Kamadolli
ಶಿಗ್ಗಾವಿ 23 : ಕನ್ನಡಕ್ಕಾಗಿ ತಮ್ಮ ಬದುಕನ್ನು ಸವೆಸಿದ ಮಹನೀಯರನ್ನು ನೆನೆದು ಕನ್ನಡವನ್ನು ಕಟ್ಟುವ ನಿಟ್ಟಿನಲ್ಲಿ ಯುವ ಮನಸ್ಸುಗಳು ಮಿಡಿಯಬೇಕು ಎಂದು ಮುಂಡಗೋಡ ಐಟಿಐ ಕಾಲೇಜಿನ ಪ್ರಾಚಾರ್ಯ ರವಿ ಕಮಡೊಳ್ಳಿ ಹೇಳಿದರು.
ಪಟ್ಟಣದ ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧೆಡೆ, ವಿದೇಶದ ನೆಲದಲ್ಲಿಯೂ ಸಹ ಕನ್ನಡಿಗರ ಒಗ್ಗಟ್ಟು ಮತ್ತು ಸಂಘಟನೆಯಿಂದ ಅತ್ಯಂತ ಸಂಭ್ರಮ ಸಡಗರದಿಂದ ಎಲ್ಲೆಡೆ ನೆಡೆಯುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಎ. ಸಿ. ವಾಲಿ ಗುರುಗಳು ಮಾತನಾಡಿ, ಕನ್ನಡ ಭಾಷೆಯ ಹುಟ್ಟು ಮತ್ತು ಬೇರೆ ಬೇರೆ ಕಾಲಘಟ್ಟಗಳಲ್ಲಿ ಅದು ಬೆಳೆದು ಬಂದ ದಾರಿಯ ರೋಮಾಂಚನಕಾರಿ ಕಥೆಯಾಗಿದೆ, ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ನೆನೆದು ಮೆಲುಕು ಹಾಕುವುದು ಸಾಮಾನ್ಯ, ಇದೊಂದು ಸಡಗರದ ಹಬ್ಬ, ಅದರಲ್ಲಿಯೂ ಶಾಲಾ, ಕಾಲೇಜುಗಳಲ್ಲಿ ಈ ಹಬ್ಬವನ್ನು ಹಲವು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಆಚರಿಸವುದು ಇನ್ನೂ ವಿಶೇಷ ಎಂದರು.
ಸಾಹಿತಿ ಶಿವಾನಂದ ಮ್ಯಾಗೇರಿ ಮಾತನಾಡಿ, ಕನ್ನಡಿಗರಾದ ನಾವು ನುಡಿ ಕನ್ನಡ, ನಡೆ ಕನ್ನಡ, ಉಸಿರು ಕನ್ನಡ ಎಂದು ಜೀವಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇದೇ ವೇಳೆ ಕನ್ನಡದ ಬಗ್ಗೆ, ಕನ್ನಡಿಗರ ಬಗ್ಗೆ ಹೆಮ್ಮೆ ಪಡುವ ವಿಷಯಗಳು ಆಗಾಗ ಕೇಳಿ ಬರುತ್ತಿರಬೇಕು, ಕನ್ನಡ, ಸಂಸ್ಕೃತಿ ಮತ್ತು ಭಾಷೆಯ ಅನ್ಯೋನ್ಯತೆಯನ್ನ ಮೆರೆಯಬೇಕು ಎಂದರು. ಉಪನ್ಯಾಸ ಡಾ. ಆನಂದ ಇಂದೂರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಐಟಿಐ ಕಲೇಜಿನ ಉಪನ್ಯಸಕ ಶಶಿಕಾಂತ ರಾಠೋಡ, ಯುವ ಮುಖಂಡ ನರಹರಿ ಕಟ್ಟಿ, ಕಕಸಾಪ ತಾಲೂಕಾಯಕ್ಷ ನಾಗಪ್ಪ ಬೆಂತೂರು ಶ್ರೀಮಂತ ಕನ್ನಡದ ಪರಂಪರೆಯ ಕುರಿತು ಮಾತನಾಡಿದರು. ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು, ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 