ಯುವ ಜನತೆ ಕ್ರೀಡೆಯ ಮೂಲಕ ನಾಯಕತ್ವ ಬೆಳೆಸಿಕೊಳ್ಳಬೇಕು
Young people should develop leadership through sports
ಬ್ಯಾಡಗಿ 14 : ಯುವಜನತೆಯಲ್ಲಿ ಶಿಸ್ತು, ನಾಯಕತ್ವ ಹಾಗೂ ಸಂಘಟನೆ ಮುಖ್ಯ. ಓದಿನೊಂದಿಗೆ ಕ್ರೀಡೆ ಯಲ್ಲೂ ತೊಡಗಿಸಿಕೊಳ್ಳುವುದರಿಂದ ಇವುಗಳು ಬೆಳೆಯಲು ಸಾಧ್ಯ. ಶಿಕ್ಷಣದ ಜೊತೆ ಕ್ರೀಡೆಗೂ ಒತ್ತು ನೀಡಿದಾಗ ನಾಯಕತ್ವ ಗುಣ ಬರಲು ಸಾಧ್ಯವಾಗಲಿದೆ ಎಂದು ತಾ.ಪಂ.ಕಾರ್ಯನಿರ್ವಾಹ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ ಹೇಳಿದರು. ಶನಿವಾರ ಅವರು ಪಟ್ಟಣದ ತಾಲೂಕಾ ಕ್ರಿಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಯುವಜನತೆಯನ್ನು ಸಂಘಟಿಸುವ ಕಾರ್ಯ ಇಂದಿನ ಬಹಳ ದೊಡ್ಡ ಅಗತ್ಯವಾಗಿದೆ. ಕ್ರೀಡೆ ಎಂಬುದು ಬಹಳ ಮಹತ್ವದ್ದಾಗಿದ್ದು, ಇದು ದೈಹಿಕ, ಮಾನಸಿಕ ಹಾಗೂ ಸಾಂಸ್ಕೃತಿಕವಾಗಿ ಬೆಳೆಯಲು ಸಹಕಾರಿಯಾಗಿದೆ. ಈ ಮೂಲಕ ಪರಿಪೂರ್ಣ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಕ್ರೀಡೆಗೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಅಧ್ಯಯನದ ಪ್ರಕಾರ ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿಯಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ ಮಾತನಾಡಿ ಕ್ರಿ?ಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುದರಿಂದ ದೆ?ಹಿಕ ಮಾನಸಿಕವಾಗಿ ಸದೃಢರಾಗಲು ಸಾಧ್ಯ.ಇಂದಿನ ಯುವ ಜನಾಂಗ ಕ್ರಿಡಾ ಮನೋಭಾವನೆ ಬೆಳಿಸಿಕೊಳ್ಳಬೇಕು, ಮೊಬೆ?ಲ್ ಬಳಕೆ ಕಡಿಮೆಮಾಡಿಕೊಂಡು ಅದರಿಂದ ಆಗುವ ದುಷ್ಪರಿಣಾಮದಿಂದ ದೂರವಿರಿ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ತಾಲೂಕಾ ಬಿಸಿಯೂಟ ಯೋಜನಾಧಿಕಾರಿ ವಸಂತ ಬೀರಣ್ಣನವರ ಸೇರಿದಂತೆ ಇತರರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 