ಯುವ ಕವಿಗಳು ಕವನಗಳ ಜತೆ ಸಮಾಜದ ಕಣ್ಣು ತೆರೆಸಬೇಕು: ಬೋಳನ್ನವರ
Young poets should open the eyes of society with their poems: Bolannavara
ಬೈಲಹೊಂಗಲ 25: ಸಾಹಿತ್ಯವು ನಾಡು ಬೆಳಗುವ ಅಮೂಲ್ಯ ಕ್ಷೇತ್ರವಾಗಿದೆ. ಯುವ ಕವಿಗಳು ತಮ್ಮ ಕವನಗಳ ಮೂಲಕ ಸಮಾಜದ ಕಣ್ಣು ತೆರೆಸಬೇಕು. ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು ಎಂದು ನೇಗಿಲಯೋಗಿ ರೈತ ಪರಿಶ್ರಮ ಸೇವಾ ಸಂಘ ಅಧ್ಯಕ್ಷ ಶಂಕರ ಬೋಳನ್ನವರ ಹೇಳಿದರು.
ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರಿನ ಬಸವ ಸಮಿತಿ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ರಾಜ್ಯಮಟ್ಟದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಉಳಿಸಿ, ಬೆಳೆಸಬೇಕಾದುದು ಕನ್ನಡಿಗರ ಕರ್ತವ್ಯ. ಪಾಲಕರು ತಮ್ಮ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಬೇಕು. ಓದುವಿಕೆ ಮತ್ತು ಬರೆಯುವಿಕೆಯ ಅನುಭವ ಹೆಚ್ಚಿಸುವ ಸಾಹಿತ್ಯದತ್ತ ಎಲ್ಲರೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಮೋಹನ ಪಾಟೀಲ ಮಾತನಾಡಿ, ‘ಯುವ ಕವಿಗಳು, ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆದು ಸಮಾಜ ಕಟ್ಟಬೇಕು. ಇಂಗ್ಲಿಷ್ ಮಾಧ್ಯಮದತ್ತ ಸಾಗುತ್ತಿರುವ ಯುವ ಪೀಳಿಗೆಯನ್ನು ಕನ್ನಡದತ್ತ ಸೆಳೆಯಲು ಸಾಹಿತ್ಯ ಕಾರ್ಯಕ್ರಮಗಳು ಸಹಕಾರಿ’ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಆರ್. ಠಕ್ಕಾಯಿ ಮಾತನಾಡಿ, ಮಕ್ಕಳಿಗೆ ಸಾಹಿತ್ಯಾಸಕ್ತಿ ಮೂಡಿಸಿ’ ‘ಹಾಡು ಕವಿತೆ ಹೇಳಿಕೊಡುವ ಮೂಲಕ ಮಕ್ಕಳಿಗೆ ಸಾಹಿತ್ಯದ ಪರಿಚಯ ಹಾಗೂ ಆಸಕ್ತಿ ಮೂಡಿಸಬೇಕು. ಸಾಹಿತ್ಯಕ್ಕೆ ಧರ್ಮ ಜಾತಿ ಎಂಬ ತಾರತಮ್ಯವಿಲ್ಲ. ಕವಿ ಲೇಖಕರೆಲ್ಲರೂ ಒಂದೇ. ಇದೇ ಮನೋಭಾವದಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡರೆ ಸಮಾಜ ಸದೃಢವಾಗಿರುತ್ತದೆ’ ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಕಾರ್ಯದರ್ಶಿ ರವಿಕುಮಾರ ಹುಲಕುಂದ, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಕಾಶಿಮ ಜಮಾದಾರ ಅವರನ್ನು ಸನ್ಮಾನಿಸಲಾಯಿತು. ಪ್ರೊ. ಸಿ.ಬಿ.ಗಣಾಚಾರಿ, ಇಮ್ರಾಹಿಮ್ ಮುಲ್ಲಾ, ಪರಿಷತ್ ಉಪಾಧ್ಯಕ್ಷ ಶ್ರೀಶೈಲ ಶರಣಪ್ಪನವರ, ಮೋಹನ ಪಾಟೀಲ, ಬಾಳೇಶ ಫಕೀರ್ಪನವರ, ಶಿವಾನಂದ ಪಟ್ಟಿಹಾಳ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 